ಬೆಂಗಳೂರು : ಇನ್ನೇನು ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಸುತ್ತಿದೆ. ಇನ್ನು ಕೇವಲ ಆರು ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹಾಗಾಗಿಯೇ ಎಲ್ಲಾ ಪಕ್ಷಗಳ ಚಟುವಟಿಕೆಗಳು ಗರಿಗೆದರಿದ್ದು ಚುನಾವಣೆಯ ಅಖಾಡ ದಿನೇ ದಿನೇ ರಂಗೇರುತ್ತಿದೆ.

ಕಾಂಗ್ರೆಸ್ ಪಕ್ಷ ಚುನಾವಣಾ ತಯಾರಿಯಾಗಿ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದರೆ ಬಿಜೆಪಿ ಮಾತ್ರ ತನ್ನ ಹಳೆಯ ತಪ್ಪನ್ನು ತಿದ್ದಿಕೊಳ್ಳುವ ಯೋಚನೆಯಲ್ಲಿದೆ. ರಾಜ್ಯ ರಾಜಕಾರಣದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ, ಪೇ ಸಿಎಂ ಆರೋಪಗಳು ಬಿಜೆಪಿಯನ್ನು ಮುಜುಗರಕ್ಕೆ ಈಡು ಮಾಡಿರುವ ಕಾರಣಕ್ಕೆ ಈ ಚುನಾವಣೆಯ ಸಂಪೂರ್ಣ ಹೊಣೆಗಾರಿಕೆಯನ್ನು ಹೈಕಮಾಂಡ್ ನೇರವಾಗಿ ನಿಭಾಯಿಸಲು ನಿರ್ಧರಿಸಿದೆ.

RELATED ARTICLES  ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ರೋಷನ್ ಬೇಗ್!


ಹಾಗಾಗಿ ಈ ಬಾರಿ ಬಹುತೇಕ ಕ್ಷೇತ್ರಗಳಿಗೆ ಆರು ತಿಂಗಳ ಮೊದಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆಗಳಿದೆ. ಅದಕ್ಕಾಗಿ ಕರ್ನಾಟಕಕ್ಕೆ ಇನ್ನೆರೆಡು ದಿನದಲ್ಲಿ ಕೇಂದ್ರದಿಂದ 12 ಜನರ ತಂಡವೊಂದು ಭೇಟಿ ನೀಡಲಿದ್ದು ಎಲ್ಲಾ ಅಭ್ಯರ್ಥಿಗಳೊಂದಿಗೆ ನೇರವಾಗಿ ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಿದೆ. ಈ ತಂಡ ಮೂರು ದಿನಗಳ ಕಾಲ ಬೆಂಗಳೂರಿನಲ್ಲೇ ಬೀಡು ಬುಟ್ಟು ಪ್ರತಿ ಮಾಹಿತಿಯನ್ನೂ ಕಲೆ ಹಾಕಿ ಹೈಕಮಾಂಡ್ ಗೆ ಅಂತಿಮ ವರದಿ ಸಲ್ಲಿಸುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಬಹುತೇಕರಿಗೆ ಟಿಕೆಟ್ ಪಕ್ಕಾ ಆಗುವ ಸಾಧ್ಯತೆ ಇದೆ.

RELATED ARTICLES  ಇಂದಿನ‌ ನಿಮ್ಮ ದಿನ ಹೇಗಿದೆ ಗೊತ್ತೇ? ಇಲ್ಲಿದೆ ನೋಡಿ ದಿನಾಂಕ 15/04/2019 ರ ದಿನ ಭವಿಷ್ಯ

ಹೊಸಬರಿಗೆ ಅವಕಾಶ : ಸುಮಾರು 100 ವಿಧಾನ ಸಭಾ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಯೋಚಿಸುತ್ತಿದ್ದು ಹಲವು ಸಂಘಪರಿವಾರದ ನಾಯಕರಿಗೆ, ನಿವೃತ್ತ ಅಧಿಕಾರಿಗಳಿಗೆ, ಸಮಾಜ ಸೇವಕರಿಗೆ ಮತ್ತು ಹಿಂದೂ ಹೋರಾಟಗಾರರಿಗೆ ಈ ಬಾರಿ ಅವಕಾಶ ಸಿಗುವ ಸಾಧ್ಯತೆಗಳು ದಟ್ಟವಾಗಿದೆ. ಕೇಂದ್ರದ ತಂಡ ಭೇಟಿ ಕೊಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರದ ಆಕಾಂಕ್ಷಿಗಳೂ ಆದಿತ್ಯವಾರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.