ಕುಮಟಾ : ರಾಣೆಬೆನ್ನೂರಿನಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ 14 ವರ್ಷ ವಯೋಮಾನದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೂಜಳ್ಳಿಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ಉಳಿದೆಲ್ಲ ತಂಡಗಳನ್ನು ಮಣಿಸಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿಯವರು, ಪಾಲಕರು, ಊರ ನಾಗರಿಕರು ಶುಭ ಕೋರಿದ್ದಾರೆ. ತರಬೇತಿ ನೀಡಿದ ನಿವೃತ್ತ ದೈಹಿಕ ಶಿಕ್ಷಕರಾದ ಶ್ರೀ ಜಿ.ಎಸ್ ನಾಯ್ಕ ರವರಿಗೂ ಎಲ್ಲೆಡೆಯಿಂದ ಅಭಿನಂದನೆಗಳು ಹರಿದುಬಂದಿದೆ. ಇವರ ಸಾಧನೆಗೆ ಶಿಕ್ಷಕರ ಸಂಘದ ಅಧ್ಯಕ್ಷರಾದ ರವೀಂದ್ರ ಭಟ್ಟ ಸೂರಿ ಅಭಿನಂದನೆ ಸಲ್ಲಿಸಿದ್ದಾರೆ.