ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ಅವರು ಸೋಮವಾರ ಸಂಜೆ ಅಧಿಕಾರ ವಹಿಸಿಕೊಂಡರು. ಕೋಲಾರ ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅವರು, 2013ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಕಂದಾಯ ಮತ್ತು ಕೆಐಎಡಿಬಿಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯವರಾಗಿರುವ ಇವರು, ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾರ್ಥಿ. ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರು ಯುವ ಜನಸೇವಾ ಇಲಾಖೆಯ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಈಗ ಪ್ರಭುಲಿಂಗ ಕವಳಿಕಟ್ಟಿ ವರ್ಗಾವಣೆಗೊಂಡು ನಿಯುಕ್ತಿಗೊಂಡಿದ್ದಾರೆ.