ದೀಪಾವ ಳಿ ಹಬ್ಬದ ಅಂಗವಾಗಿ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಟೆಲಿಕಾಂ ನೂತನವಾಗಿ ಎರಡು ಆಕರ್ಷಕ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸಿದೆ. ಈ ಮೂಲಕ ಬಿಎಸ್‌ಎನ್‌ಎಲ್ ಟೆಲಿಕಾಂ ಖಾಸಗಿ ಟೆಲಿಕಾಂಗಳಿಗೆ ನೇರ ಫೈಟ್ ನೀಡುವ ಪ್ರಯತ್ನ ಮಾಡಿದೆ ಎನ್ನಬಹುದು. ಇನ್ನು ಈ ಎರಡು ನೂತನ ರೀಚಾರ್ಜ್ ಯೋಜನೆಗಳು ಅನಿಯಮಿತ ಹಾಗೂ ಅತ್ಯುತ್ತಮ ವ್ಯಾಲಿಡಿಟಿ ಸೌಲಭ್ಯಗಳನ್ನು ಒಳಗೊಂಡಿದ್ದು, ಜಿಯೋ ಹಾಗೂ ಏರ್‌ಟೆಲ್‌ಗಳಿಗೆ ಟಾಂಗ್ ನೀಡಿದೆ.
ಬಿಎಸ್‌ಎನ್‌ಎಲ್ ಸಂಸ್ಥೆಯು ಹೊಸದಾಗಿ ಎರಡು ರೀಚಾರ್ಜ್ ಪ್ಲ್ಯಾನ್‌ಗಳನ್ನು ಬಿಡುಗಡೆ ಮಾಡಿದೆ. ಅವುಗಳು ಕ್ರಮವಾಗಿ 439 ರೂ. ಮತ್ತು 1198 ರೂ. ಬೆಲೆಯನ್ನು ಹೊಂದಿವೆ. ಅನಿಯಮಿತ ವಾಯಿಸ್ ಕರೆ ಹಾಗೂ ಉತ್ತಮ ವ್ಯಾಲಿಡಿಟಿ ಪ್ರಯೋಜನಗಳನ್ನು ಈ ರೀಚಾರ್ಜ್ ಯೋಜನೆಗಳು ಹೊಂದಿವೆ. ಇನ್ನು ಬಿಎಸ್‌ಎನ್‌ಎಲ್‌ನ 1198 ರೂ. ಯೋಜನೆಯು ವಾರ್ಷಿಕ ವ್ಯಾಲಿಡಿಟಿ ಪಡೆದಿದ್ದು, 439 ರೂ. ಪ್ಲ್ಯಾನ್ ಮೂರು ತಿಂಗಳ ವ್ಯಾಲಿಡಿಟಿ ಒಳಗೊಂಡಿದೆ.
ಈ ಎರಡು ಯೋಜನೆಗಳು ಅಧಿಕ ವ್ಯಾಲಿಡಿಟಿ ಬಯಸೋ ಗ್ರಾಹಕರಿಗೆ ಹೆಚ್ಚು ಸೂಕ್ತ ಎನಿಸುತ್ತವೆ. ದೇಶದ ಎಲ್ಲ ಟೆಲಿಕಾಂ ಪ್ರದೇಶಗಳಲ್ಲಿ ಲಭ್ಯ ಎನ್ನಲಾಗಿದೆ. ಹಾಗಾದರೇ ಬಿಎಸ್‌ಎನ್‌ಎಲ್ ಸಂಸ್ಥೆಯ ಈ ಎರಡು ಹೊಸ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಹಾಗೂ ಬಿಎಸ್‌ಎನ್ ಟೆಲಿಕಾಂನ ಇತರೆ ಕೆಲವು ಜನಪ್ರಿಯ ಪ್ರಿಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಬಿಎಸ್‌ಎನ್‌ಎಲ್ 439ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ದೀಪಾವಳಿ ಪ್ರಯುಕ್ತ ಬಿಎಸ್‌ಎನ್‌ಎಲ್ ಟೆಲಿಕಾಂ ಹೊಸದಾಗಿ 439ರೂ. ರೀಚಾರ್ಜ್ ಯೋಜನೆ ಪರಿಚಯಿಸಿದೆ. ಈ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಈ ಅವಧಿಯಲ್ಲಿ ಅನಿಯಮಿತ ವಾಯಿಸ್ ಕರೆ ಪ್ರಯೋಜನ ನೀಡುತ್ತದೆ. ಇದರೊಂದಿಗೆ ಪೂರ್ಣ ವ್ಯಾಲಿಡಿಟಿಗೆ ಒಟ್ಟು 300 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯಲ್ಲಿ ಯಾವುದೇ ಡೇಟಾ ಪ್ರಯೋಜನ ದೊರೆಯುವುದಿಲ್ಲ.
ಬಿಎಸ್‌ಎನ್‌ಎಲ್ 1198ರೂ. ರೀಚಾರ್ಜ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 1198ರೂ. ರೀಚಾರ್ಜ್ ಯೋಜನೆಯಲ್ಲಿ ಪ್ರತಿ ತಿಂಗಳು 3 GB ಡೇಟಾ, ಇದರೊಂದಿಗೆ ಪ್ರತಿ ತಿಂಗಳು 300 ನಿಮಿಷಗಳ ಉಚಿತ ವಾಯಿಸ್ ಕರೆ ಪ್ರಯೋಜನ ಲಭ್ಯವಿದೆ. ಇನ್ನು ಈ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ 36GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಮುಖ್ಯವಾಗಿ ಅಧಿಕ ವ್ಯಾಲಿಡಿಟಿ ನಿರೀಕ್ಷಿಸುವ ಗ್ರಾಹಕರಿಗೆ ಅತ್ಯುತ್ತಮ ಪ್ಲ್ಯಾನ್ ಎನಿಸುತ್ತದೆ.
ಬಿಎಸ್‌ಎನ್‌ಎಲ್ 769ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 769 ರೂ. ಪ್ಲ್ಯಾನ್, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆ ಗಳು ಲಭ್ಯ.
ಬಿಎಸ್‌ಎನ್‌ಎಲ್ 269ರೂ. ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಬಿಎಸ್‌ಎನ್‌ಎಲ್ ಟೆಲಿಕಾಂನ 269 ರೂ. ಪ್ಲ್ಯಾನ್ ಅಲ್ಪಾವಧಿಯ ಯೋಜನೆ ಆಗಿದ್ದು, ಒಟ್ಟು 30 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದೆ. ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಹೆಚ್ಚುವರಿ ಯಾಗಿ ಎರೋಸ್ ನೌ ಎಂಟರ್‌ಟೈನ್‌ಮೆಂಟ್, ಲಿಸ್ಟ್ನ್ ಪಾಡ್‌ಕ್ಯಾಸ್ಟ್ ಸೇವೆಗಳು ಲಭ್ಯ.
Source : Gizbot