ಕಾರವಾರ: ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಖ್ಯಾತ ಯಕ್ಷಗಾನ ಭಾಗವತರಾಗಿರುವ ಕುಮಟಾ ತಾಲೂಕಿನ ಧಾರೇಶ್ವರದ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಇದೇ ವೇಳೆ ಮುಂಡಗೋಡು ತಾಲೂಕಿನ ಇಂದೂರಿನ ಜನಪದ ಕಲಾವಿದರು ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವ ಸಹದೇವಪ್ಪ ನಡಗೇರಿ ಅವರಿಗೂ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.ಒಟ್ಟು 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಇದರಲ್ಲಿ ಸೇರಿದ್ದಾರೆ.

2022 ನೇಸಾಲಿನ ರಾಜ್ಯೋತ್ಸವ ಪ್ರಶಸ್ತಿ

ಚಿತ್ರನಟರಾದ ದತ್ತಾತ್ರೇಯ (ದತ್ತಣ್ಣ), ಅವಿನಾಶ್‌, ಸಿಹಿಕಹಿ ಚಂದ್ರು, ಸೋಲಿಗರಲ್ಲಿ ಸಹಕಾರ ಸಂಸ್ಥೆಗಳ ಕುರಿತು ಅರಿವು ಮೂಡಿಸಿದ ಸೋಲಿಗರ ಮಾದಮ್ಮ, ರಾಮನಗರದ ಸಾಲುಮರದ ನಿಂಗಣ್ಣ, ಉಡುಪಿ ಜಿಲ್ಲೆಯ ದೈವ ನರ್ತಕ ಗುಡ್ಡ ಪಾಣಾರ, ಯಕ್ಷಗಾನ ಕಲಾವಿದರಾದ ಎಂ. ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ಪತ್ರಕರ್ತರಾದ ಎಚ್‌.ಆರ್‌. ಶ್ರೀಶ, ಜಿ.ಎಂ. ಶಿರಹಟ್ಟಿ ಪುರಸ್ಕೃತರಲ್ಲಿ ಸೇರಿದ್ದಾರೆ.

RELATED ARTICLES  ಕುಮಟಾದಲ್ಲಿ ಉಪನ್ಯಾಸಕಿ ಆತ್ಮಹತ್ಯೆ? : ನೇಣಿಗೆ ಶರಣಾದ ಸ್ವಾತಿ.

ಸಂಕೀರ್ಣ ಕ್ಷೇತ್ರ: ಸುಬ್ಬರಾಮ ಶೆಟ್ಡಿ – ಬೆಂಗಳೂರು, ವಿದ್ವಾನ್ ಗೋಪಾಲ ಕೃಷ್ಣ ಶರ್ಮಾ – ಬೆಂಗಳೂರು, ಶ್ರೀಮತಿ ಸೋಲಿಗರ ಮಾದಮ್ಮ – ಚಾಮರಾಜನಗರ.

ಕೃಷಿ‌ ಕ್ಷೇತ್ರ: ಗಣೇಶ್ ತಿಮ್ಮಯ್ಯ – ಕೊಡಗು, ಚಂದ್ರಶೇಖರ್ ನಾರಯಣಪುರ – ಚಿಕ್ಕಮಗಳೂರು.

ವಿಜ್ಞಾನ ತಂತ್ರಜ್ಞಾನ: ಕೆ.ಶಿವನ್ – ಬೆಂಗಳೂರು, ಡಾ.ಡಿ.ಆರ್.ಬಳೂರಗಿ – ರಾಯಚೂರು.

ಪತ್ರಿಕೋದ್ಯಮ: ಎಚ್ ಆರ್ ಶ್ರೀಶಾ – ಬೆಂಗಳೂರು, ಜಿ.ಎಂ.ಶಿರಹಟ್ಟಿ ‌- ಗದಗ. 

ಸೈನಿಕ ಕ್ಷೇತ್ರ: ಸು‌ಬೇದಾರ್ ಬಿ.ಕೆ ಕುಮಾರಸ್ವಾಮಿ – ಬೆಂಗಳೂರು.

ಯಕ್ಷಗಾನ ಕ್ಷೇತ್ರ: ಸುಬ್ರಹ್ಮಣ್ಯ ಧಾರೇಶ್ವರ – ಉತ್ತರ ಕನ್ನಡ.

ಸಂಗೀತ ಕ್ಷೇತ್ರದ ಶ್ರೀ ಅನಂತಾಚಾರ್ಯ ಬಾಳಾಚಾರ್ಯ‌, ಜಾನಪದ ಕ್ಷೇತ್ರದ ಶ್ರೀಮತಿ ಸಾವಿತ್ರಿ ಪೂಜಾರ್, ಬಯಲಾಟ ಕ್ಷೇತ್ರದ ಶ್ರೀ ಅಡವಯ್ಯ ಚ.ಹಿರೇಮಠ. ಕ್ರೀಡಾ ಕ್ಷೇತ್ರದ ಶ್ರೀ ದತ್ತಾತ್ರೇಯ ಗೋವಿಂದ ಕುಲಕರ್ಣಿ ಆಯ್ಕೆಯಾಗಿದ್ದು, ಈ ವರ್ಷ ಧಾರವಾಡ ಜಿಲ್ಲೆಯ ಒಟ್ಟು ನಾಲ್ಕು ಜನರಿಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

RELATED ARTICLES  ಆಯತಪ್ಪಿ ಎದುರಾಯ್ತು ಅಪಾಯ:ಅಂಕೋಲಾದಲ್ಲಿ ಬಾವಿಗೆ ಬಿದ್ದು ಹಾರಿಹೋಯ್ತು ಬಾಲಕನ ಪ್ರಾಣ!

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹತ್ತು ಸಂಘ ಸಂಸ್ಥೆಗಳಿಗೆ ವಿಶೇಷ ಪ್ರಶಸ್ತಿ ಪ್ರಕಟಿಸಲಾಗಿದೆ. ಪುರಸ್ಕೃತರಿಗೆ ತಲಾ 5 ಲಕ್ಷ ನಗದು, 25 ಗ್ರಾಂ. ಚಿನ್ನ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು ಎಂದು ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಪುನೀತ್ ರಾಜ್‌ಕುಮಾರ್​ಗೆ ಕರ್ನಾಟಕ ರತ್ನ: ಸ್ಯಾಂಡಲ್​ವುಡ್‌ನ ಪವರ್  ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನ್ನಡ ರಾಜ್ಯೋತ್ಸವ ದಿನದಂದು ಪ್ರದಾನ ಮಾಡುವುದಾಗಿ ಹಿಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜೂನಿಯರ್ ಎನ್‍ಟಿಆರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಅಲ್ಲದೇ ಸೂಪರ್ ಸ್ಟಾರ್ ರಜನಿಕಾಂತ್ ಸಹ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಹೂವಿನ ಹಡಗಲಿಯ ಮಲ್ಲಮ್ಮನವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯ ಮಲ್ಲಮ್ಮ ಅವರಿಗೆ ಪೌರ ಕಾರ್ಮಿಕರ ಕ್ಷೇತ್ರದಲ್ಲಿ ಸೇವೆ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.