ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಯಲ್ಲಿ 1 ಪ್ರಾಜೆಕ್ಟ್ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೃತ್ತಿ ಮಾಡಲು ಬಯಸುವವರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಇದೇ ನವೆಂಬರ್ 10, 2022 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಭಾಗವಹಿಸಬಹುದು.


ಸಂದರ್ಶನಕ್ಕೆ ಹೋಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

RELATED ARTICLES  ಫೆ.3ರಂದು ಹೊನ್ನಾವರದಲ್ಲಿ ಉದ್ಯೋಗ ಮೇಳ: ಭಾಗವಹಿಸಲಿದೆ 20ಕ್ಕೂ ಹೆಚ್ಚು ಕಂಪನಿಗಳು.
ಸಂಸ್ಥೆಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ
ಹುದ್ದೆಯ ಹೆಸರುಪ್ರಾಜೆಕ್ಟ್​ ಫೆಲೋ
ಒಟ್ಟು ಹುದ್ದೆ1
ವಿದ್ಯಾರ್ಹತೆಬಿಎಸ್ಸಿ
ಸ್ಥಳದಕ್ಷಿಣ ಕನ್ನಡ
ವೇತನಮಾಸಿಕ ₹ 20,000
ಅರ್ಜಿ ಸಲ್ಲಿಕೆ ಬಗೆಆನ್​ಲೈನ್
ನೋಟಿಫಿಕೇಶನ್ ಬಿಡುಗಡೆ ದಿನಾಂಕ27/10/2022
ಸಂದರ್ಶನ ನಡೆಯುವ ದಿನಾಂಕ10/11/2022



ಅರ್ಹತಾ ಮಾನದಂಡಗಳೇನು?


ವಿದ್ಯಾರ್ಹತೆ:
ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅಗ್ರಿಕಲ್ಚರ್​​ನಲ್ಲಿ ಡಿಪ್ಲೋಮಾ, ಲೈಫ್​ ಸೈನ್ಸ್​/ಬಾಟನಿ/ ಅಗ್ರಿಕಲ್ಚರ್​​ನಲ್ಲಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.

RELATED ARTICLES  ಟಿವಿ ಟೆಕ್ನೀಶಿಯನ್, ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಹಾಗೂ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿಗಳಿಗಾಗಿ ಅರ್ಜಿ ಆಹ್ವಾನ


ವಯೋಮಿತಿ:
ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 10, 2022ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಸಂದರ್ಶನ ನಡೆಯುವ ಸ್ಥಳ:
ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ಸಿಪಿಸಿಆರ್‌ಐ) ಕಿದು
ನೆಟ್ಟಾನ ಪೋಸ್ಟ್​,
ಕಡಬ ತಾಲೂಕು
ದಕ್ಷಿಣ ಕನ್ನಡ ಜಿಲ್ಲೆ
ಕರ್ನಾಟಕ-574230



ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/10/2022
ಸಂದರ್ಶನ ನಡೆಯುವ ದಿನಾಂಕ: 10/11/2022