ಮುಂಡಗೋಡ: ತಾಲೂಕಿನ ನಂದೀಪುರದ ಬಳಿ ನಡೆದ ಅಪಘಾತ ಇದೀಗ ಭಾರೀ ಸುದ್ದಿಯಾಗಿದೆ. ಇಲ್ಲಿ ಕಾರೊಂದು ಎರಡು ಬೈಕ್‌ಗಳಿಗೆ ಡಿಕ್ಕಿಯಾಗಿರುವ ಘಟನೆ ನಡೆದಿದ್ದು, ಬೈಕ್‌ಗಳಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಅತಿ ವೇಗವಾಗಿ ರಾಂಗ್ ಸೈಡ್‌ನಲ್ಲಿ ಬಂದು ಎರಡು ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಒಂದು ಬೈಕ್‌ನಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೊಂದು ಬೈಕ್ ಚಾಲಕನಿಗೂ ಗಾಯಗಳಾಗಿವೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದವರನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಪೊಲೀಸರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಅದರಲ್ಲಿ ಈರ್ವರು ಪುರುಷರು, ಈರ್ವರು ಯುವತಿಯರು ಇದ್ದರು. ಅಪಘಾತ ನಡೆದ ಸಂದರ್ಭದಲ್ಲಿ ಭಯಭೀತರಾಗಿ ನಾಲ್ವರೂ ಓಡಿ ಹೋಗಿದ್ದಾರೆ ಎನ್ನಲಾಗಿದೆ.
ಆದರೆ ಕಾರಿನಲ್ಲಿ ಎಣ್ಣೆ ಬಾಟಲಿಗಳು, ಕಾಂಡೋಮ್ ಪ್ಯಾಕೆಟ್ ಸಿಕ್ಕಿದ್ದು, ಕುಡಿದ ನಶೆಯಲ್ಲೇ ಅತಿ ವೇಗದಲ್ಲಿ ಕಾರು ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.