ಬೆಂಗಳೂರು : ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಶಾಸಕ ನೆ.ಲ. ನರೇಂದ್ರಬಾಬು ಬಿಜೆಪಿ ಸೇರಿದ್ದಾರೆ.ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಮಾಜಿ ಡಿಸಿಎಂ ಆರ್. ಅಶೋಕ್ ನೇತೃತ್ವದಲ್ಲಿ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಲ ಕಮಲ ಕೈ ಹಿಡಿದಿದ್ದಾರೆ.

RELATED ARTICLES  ಬಜೆಟ್ ಮಂಡನೆಗೆ ಮುನ್ನ ಷೇರುಪೇಟೆ ಸಂವೇದಿ ಸೂಚ್ಯಂಕ ಏರಿಕೆ

ಮಹಾಲಕ್ಷ್ಮೀ ಲೇ ಔಟ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನರೇಂದ್ರಬಾಬು ಅವರೊಂದಿಗೆ ಮಾಹಿತಿ ಆಯೋಗದ ಮಾಜಿ ಅಧ್ಯಕ್ಷ ಶಂಕರ್ ಪಾಟೀಲ್, ನಟಿಯರಾದ ಆಶಾಲತಾ, ಜ್ಯೋತಿ ಶ್ರೀಧರ್ ಸೇರಿದಂತೆ ಹಲವು ಕಲಾವಿದರು ಬಿಜೆಪಿ ಸೇರ್ಪಡೆಗೊಂಡರು.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 27-03-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?