ಅಡಿಲೇಡ್: ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 5 ರನ್‌ಗಳಿಂದ ರೋಚಕ ಗೆಲುವು ಸಾಧಿಸಿದೆ. ಟಿ20 ವಿಶ್ವಕಪ್ ಭಾಗವಾಗಿ ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಇಂದು ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಬೌಲಿಂಗ್ ಆಯ್ದುಕೊಂಡಿತ್ತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತವು 6 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತ್ತು. ತಂಡದ ಪರ ವಿರಾಟ್ ಕೊಹ್ಲಿ
ಅಜೇಯ 64 ರನ್, ಕೆ.ಎಲ್.ರಾಹುಲ್ 50 ರನ್ ಹಾಗೂ ಸೂರ್ಯಕುಮಾರ್ ಯಾದವ್ ಸ್ಫೋಟಕ 30 ರನ್ ಗಳಿಸಿದ್ದರು.

RELATED ARTICLES  ಶ್ರೀರಾಮಾಯಣ ಹಕ್ಕಿನೋಟ - ಸರಳ ಕಾರ್ಯಕ್ರಮ

ಆದರೆ ಬಾಂಗ್ಲಾದೇಶದ ಇನ್ನಿಂಗ್ಸ್ ವೇಳೆ ಮಳೆ ಸುರಿದ ಪರಿಣಾಮ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 16 ಓವರ್‌ಗಳಲ್ಲಿ 151 ರನ್‌ಗಳ ಗುರಿ ನಿಗದಿ ಮಾಡಲಾಯಿತು. ಈ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾ 6 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಬಾಂಗ್ಲಾ ಪರ ಲಿಟ್ಟನ್ ದಾಸ್ 60 ರನ್ ಬಾರಿಸಿದರು ಎಂದು ವರದಿಯಾಗಿದೆ.

RELATED ARTICLES  ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿದ ಕುಮಟೆಯ ಕೊಂಕಣ ಶಿಕ್ಷಣ ಸಂಸ್ಥೆ.