ರವಿವಾರದಂದು ಶಿಕ್ಷಕರ ಅರ್ಹತಾ ಪರೀಕ್ಷೆ.

ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022 ಯು ನವೆಂಬರ್ 06 ರಂದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟೂ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಪ್ರಾರಂಭವಾಗುವ ಮುನ್ನ 1 ಘಂಟೆ ಮುಂಚಿತವಾಗಿ ಹಾಜರಿರಬೇಕು. ಆ ನಂತರದಲ್ಲಿ ಬರುವ ಯಾವದೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಪರೀಕ್ಷಾರ್ಥಿಗಳು
ಪರೀಕ್ಷಾ ಕೇಂದ್ರದಲ್ಲಿ ಯಾವದೇ ಎಲೆಕ್ಟ್ರಾನಿಕ್ಸ್ ಮೊಬೈಲ್, ಕ್ಯಾಲ್ಕುಲೇಟರ್, ಎಲೆಕ್ಟ್ರಾನಿಕ್ಸ್ ವಾಚ್, ಮೈಕ್ರೋ ಫೋನ್ ಬ್ಲೂಟೂತ್ ಉಪಕರಣಗಳನ್ನು ತರುವಂತಿಲ್ಲ. ಅಲ್ಲದೆ ಶೂ ಮತ್ತು ಸಾಕ್ಸ್ ಹಾಕಿಕೊಂಡು ಬರುವದನ್ನು ನಿಷೇದಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಸಂಸ್ಕøತ ದಿನಾಚರಣೆ-ಉಪನ್ಯಾಸ ಕಾರ್ಯಕ್ರಮ ಇಂದು.

ಬೆಳಿಗ್ಗೆ 9.30‌ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ–1, ಮಧ್ಯಾಹ್ನ 2ರಿಂದ ಸಂಜೆ 4.30ರವರೆಗೆ ಪತ್ರಿಕೆ -2 ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ನಿಂದ ಪ್ರವೇಶಪತ್ರ ಡೌನ್‌ ಲೋಡ್‌ ಮಾಡಿಕೊಳ್ಳಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷಾ ಮಾರ್ಗಸೂಚಿಯನ್ನೂ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಜೊತೆಗೆ, ಜಿಲ್ಲಾ ನೋಡಲ್‌ ಅಧಿಕಾರಿಗಳ ಸಂಪರ್ಕ ಸಂಖ್ಯೆಯನ್ನೂ ನೀಡಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದುಕೊಳ್ಳಬಹುದು.

ಇದನ್ನೂ ಓದಿ – ರಸ್ತೆಯಲ್ಲಿ ಹಂಪ್ ದಾಟುವಾಗ ಬಿದ್ದ ತಾಯಿ : ಅವಘಡದಲ್ಲಿ ಮಹಿಳೆ ಸಾವು.

RELATED ARTICLES  ಪ್ರಥಮ ದರ್ಜೆ ಸಹಾಯಕರ ಸ್ಪರ್ಧಾತ್ಮಕ ಪರಿಕ್ಷೆ 25ಕ್ಕೆ

ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

ಕಾರವಾರ:ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿನಾಂಕ 1 ಜನವರಿ 2022 ಕ್ಕೆ ಇದ್ದಂತೆ ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಬಾಧಿತರಾದ ಶಿಕ್ಷಕರು ಪೂರಕ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಕ್ಷೇಪಣೆ ಸಲ್ಲಿಸಬಹುದಾಗಿದೆ.

ನವೆಂಬರ್ 5 ರ ನಂತರದಲ್ಲಿ ಸಲ್ಲಿಸುವ ಯಾವುದೇ
ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.