ಅಂಕೋಲಾ : ನಿವೃತ್ತ ಸರ್ಕಾರಿ ಅಧಿಕಾರಿ ಕವಿ ತೆಂಕಣಕೇರಿಯ ಕೇಶವ ಡಿ. ನಾಯ್ಕ ಅವರು ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ವಿಧಿವಶರಾದರು. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಯಾಗಿದ್ದ ಕೆ. ಡಿ. ನಾಯ್ಕ ಅವರು ಕಾರವಾರದಲ್ಲಿ, ಬೆಂಗಳೂರು ಹಾಗೂ ಧಾರವಾಡದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿದ್ದ ಇವರು ತೆಂಕಣಕೇರಿಯಲ್ಲಿ ತಮ್ಮ ನಿವೃತ್ತಿ ಜೀವನ ಸಾಗಿಸುತ್ತಿದ್ದರು.

RELATED ARTICLES  ಗ್ರಾಮ ಒಕ್ಕಲು ಯುವ ಬಳಗದಿಂದ ಅಪಘಾತ ಪರಿಹಾರ ನಿಧಿಯ ವಿತರಣೆ

ಹವ್ಯಾಸಿ ಕವಿಯು ಆಗಿರುವ ಕೆ. ಡಿ. ನಾಯ್ಕ ಅವರು ತೆಂಕಣಗಾಳಿ ಸೇರಿದಂತೆ ಮೂರು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಇವರು ಅಪ್ಪಟ ಕನ್ನಡ ಪ್ರೇಮಿಯಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಊರಿನ ಗಣ್ಯರು ಸಂತಾಪ ಸೂಚಿಸಿದ್ದಾರೆ.

RELATED ARTICLES  ಕುಮಟಾದಲ್ಲಿ ಜನಸುರಕ್ಷಾ ಯಾತ್ರೆ : ಮೆರವಣಿಗೆಯಲ್ಲಿ ಭಾಗವಹಿಸಿದ ಬಿಜೆಪಿ ಪ್ರಮುಖರು.

ತಮ್ಮ ಮೂಲಕ ನೂರಾರು ಬಡ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಿದ್ದರು. ಮೃತರ ಅಂತಿಮ ವಿಧಿ ವಿಧಾನಗಳು ಅವರ ಸ್ವಗ್ರಾಮ ಉತ್ತರ ಕನ್ನಡದ ಅಂಕೋಲಾದ ತಂಕಣಕೇರಿಯಲ್ಲಿ ಬುಧವಾರ ಬೆಳಿಗ್ಗೆ ನೆರವೇರಲಿದೆ.