ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ದಿನಗಳಿಂದ ಸರ್ಕಾರಿ ನೌಕರರಿಂದ ಒತ್ತಾಯಗಳಿದ್ದವು, ಇದರಂತೆ ವೇತನ ಪರಿಷ್ಕರಣೆ ಹಾಗೂ ಸೌಲಭ್ಯಗಳ ವಿಸ್ತರಣೆಗೆ 7ನೇ ವೇತನ ಆಯೋಗ ರಚಿಸಲು ನಿರ್ಧರಿಸಲಾಗಿದೆ. ನವೆಂಬರ್ ಅಂತ್ಯದ ಒಳಗೆ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

RELATED ARTICLES  ಲೀಗಲ್‍ಡೆಸ್ಕ್ ನಿಂದ ಬೆಂಗಳೂರು ಒನ್ ಕೇಂದ್ರದೊಂದಿಗೆ ಬಾಡಿಗೆ ಕರಾರು ಪತ್ರ ಸೇವೆ ಪ್ರಾರಂಭ.

ಭಾನುವಾರ ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ನಿಯೋಗ ಜೊತೆ ಸಿಎಂ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದರು.

RELATED ARTICLES  ಪೊಸಡಿಗುಂಪೆ ಶಂಕರ ಧ್ಯಾನ ಮಂದಿರದಲ್ಲಿ ಸೇವಾ ಅರ್ಘ್ಯ ಕಾರ್ಯಕ್ರಮ

ಮಾತುಕತೆ ವೇಳೆ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ವೇತನ ಆಯೋಗ ರಚಿಸಲಾಗುವುದು. ತ್ವರಿತವಾಗಿ ಮಧ್ಯಂತರ ವರದಿ ನೀಡಲು ಸೂಚಿಸಲಾಗುವುದು. 2023ರ ಮಾರ್ಚ್‌ ಒಳಗೆ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

Source : Kannadaprabha