ಕಾರವಾರ : ರಾಜ್ಯ ಸರ್ಕಾರವು ಜನವರಿ 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿಯನ್ನು ನೀಡಲಿದೆ. ಕೇರಳದ ಮಾದರಿಯಲ್ಲಿ ರಾಜ್ಯದಲ್ಲೂ ಕುಚಲಕ್ಕಿ ಭತ್ತಕ್ಕೆ ಪ್ರೋತ್ಸಾಹ ಧನ ನೀಡುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು. ಪಡಿತರದಲ್ಲಿ ಕುಚಲಕ್ಕಿ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿ ಸೂಚಿಸಿದ್ದಾರೆ. ಈ ಮೂರೂ ಜಿಲ್ಲೆಗಳಿಗೆ ತಿಂಗಳಿಗೆ 1 ಲಕ್ಷ ಕ್ವಿಂಟಾಲ್ ಅಕ್ಕಿ ಬೇಕಿದೆ. ಇದಕ್ಕಾಗಿ 18 ಲಕ್ಷ ಕ್ವಿಂಟಾಲ್ ಭತ್ತ ಸಂಸ್ಕರಿಸಬೇಕಾಗಿದೆ. ಇದನ್ನು ಬೇರೆಡೆಯಿಂದ ಕೊಳ್ಳುವ ಬದಲು ಕರಾವಳಿ ಜಿಲ್ಲೆಗಳಲ್ಲಿಯೇ ಖರೀದಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

RELATED ARTICLES  ಹೆದ್ದಾರಿ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಕಂಟೇನರ್ ಡಿಕ್ಕಿ - ಸ್ಥಳದಲ್ಲಿಯೇ ಓರ್ವನ ದುರ್ಮರಣ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನರಿಗೆ ಕುಚಲಕ್ಕಿ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ವಿಶೇಷ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಡಿಸೆಂಬರ್‌ 1ರಿಂದ ಕುಚಲಕ್ಕಿ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್​ದಾರರಿಗೆ ಕುಚಲಕ್ಕಿ ವಿತರಿಸಲಾಗುವುದು. ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ​​ ಕುಚಲಕ್ಕಿ ಅವಶ್ಯಕತೆ ಇದೆ ಎಂದು ತಿಳಿಸಿದರು.

RELATED ARTICLES  ಚಾಕಲೇಟ್ ನೀಡೋದಾಗಿ ಕರೆದು ಸಲಿಂಗ ಲೈಂಗಿಕ ಕ್ರಿಯೆ ನಡೆಸಿದಾತನಿಗೆ ಶಿಕ್ಷೆ.

ಪ್ರತಿ ಕ್ವಿಂಟಲ್​ ಕುಚಲಕ್ಕಿಗೆ 2,540 ರೂಪಾಯಿ ನೀಡಲಾಗುವುದು. ಕರಾವಳಿ ಜಿಲ್ಲೆಗಳಲ್ಲಿ ಬಿಪಿಎಲ್ ಪಡಿತರ ಹೊಂದಿರುವವರಿಗೆ ಕುಚಲಕ್ಕಿ ವಿತರಿಸಬೇಕು ಎನ್ನುವ ಬಹುದಿನಗಳ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಉಡುಪಿ ಸಮೀಪದ ಕಾಪುವಿನಲ್ಲಿ ಇತ್ತೀಚೆಗೆ ನಡೆದ ಜನಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಡಿತರದಲ್ಲಿ ಕುಚಲಕ್ಕಿ ಕೊಡಬೇಕು ಎಂಬ ಕರಾವಳಿಗರ ಬಹುದಿನಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸುತ್ತಿದೆ ಎಂದು ಘೋಷಿಸಿದ್ದರು.