ಕಾರವಾರ : ಬಸ್ಸಿನಲ್ಲಿ ಪ್ರಯಾಣ ಮಾಡುವ ವೇಳೆಯಲ್ಲಿಯೇ ಕಳೆದ ಕೆಲವು ವರ್ಷಗಳ ಹಿಂದೆ ಕಾರವಾರದಲ್ಲಿ ಸಿಜೆಎಂ ಆಗಿ ಕರ್ತವ್ಯ ನಿರ್ವಹಿಸಿದ್ದ ಈಗ ಜಿಲ್ಲಾ ನ್ಯಾಯಾಧೀಶರಾಗಿದ್ದ ನಾಗಪ್ಪ ಎಂಬುವವರು ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ. ಇವರು ಬಸ್ ಮೂಲಕ ಗೋವಾಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ.
ನಾಗಪ್ಪ ಅವರು ಗೋವಾಕ್ಕೆ ಹೋಗಲು ಕಾರವಾರದಿಂದ ಬಸ್ ಹತ್ತಿದ್ದರು. ಬಸ್ ಕೋಡಿಬಾಗದ ದಿವೇಕರ ಕಾಲೇಜು ಸಮೀಪ ಬಂದಾಗ ಅವರು ಕುಸಿದು ಬಿದ್ದಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ
- ಸಂಸದ ಕಾಗೇರಿಯವರ ಮನೆ ಸಮೀಪ ಚಿರತೆ ಪ್ರತ್ಯಕ್ಷ.
- “ತರಂಗ ಫರ್ನಿಚರ್ ಫೆಸ್ಟಿವಲ್” ಪ್ರಾರಂಭವಾಗಿದೆ.
- ಸರಸ್ವತಿ ಪಿ.ಯು ಕಾಲೇಜಿನಲ್ಲಿ ‘ಸಂಸ್ಕಾರಧಾರೆ’ ಅರ್ಥಪೂರ್ಣ ಕಾರ್ಯಕ್ರಮ
ಅವರನ್ನು ಗಮನಿಸಿದಾಗ ಈ ವೇಳೆ ಹೃದಯಾಘಾತವಾಗಿದೆ ಎಂಬುದು ಅಂದಾಜಿಸಲಾಗಿದೆ. ಕೂಡಲೇ ಬಸ್ ನಿಲ್ಲಿಸಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಸಂಬoಧಪಟ್ಟವರಿಗೆ ತಿಳಿಸಿದ್ದಾರೆ. ಈ ಕುರಿತು ನಗರಠಾಣೆಯಲ್ಲಿ ದೂರು ದಾಖಲಾಗಿದೆ. ನಾಗಪ್ಪ ಅವರು ಈಗ ಜಿಲ್ಲಾ ನ್ಯಾಯಾಧೀಶರಾಗಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.