ಬೆಂಗಳೂರು : ರಾಜ್ಯದ ಜನರಿಗೆ ಮಳೆಯ ಕಾಟ ಇನ್ನು ಮುಂದುವರೆಯಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ. ಮಳೆಗಾಲ ಮುಗಿದು ಚಳಿಗಾಲ ಪ್ರಾರಂಭವಾದರೂ ವರುಣ ಮತ್ತೆ ಮತ್ತೆ ಜನ ಜೀವನದ ಮೇಲೆ ಪ್ರಭಾವ ಬೀರುತ್ತಿದ್ದಾನೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳು, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನರ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.