ಕುಮಟಾ : ಸರಕಾರದ ಮಹತ್ವಕಾಂಕ್ಷೆ ಯೋಜನೆಯಾದ ಮಾತೃಪೂರ್ಣ ಯೋಜನೆ ಕಾರ್ಯಕ್ರಮ ಉತ್ತರಕನ್ನಡದ ಕುಮಟಾದ ತಾಲೂಕಾಡಳಿತ, ತಾಲೂಕ ಪಂಚಾಯತ್, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಮಾತೃಪೂರ್ಣ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಕುಮಟಾದ ಚಿತ್ರಗಿ ಕಲ್ಲುಗುಡ್ಡ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ಶಾರದಾ ಮೋಹನ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಶಾಸಕರು ಮಾತನಾಡಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಮಾತೃಪೂರ್ಣ ಯೋಜನೆ, ನಮ್ಮ ದೇಶದಲ್ಲಿ ಹುಟ್ಟುವಂತ ಮಕ್ಕಳು, ಬಾಣಂತಿಯರು ಆರೋಗ್ಯ ಪೂರ್ಣವಾಗಿರಬೇಕು ಎನ್ನುವ ದೃಷ್ಠಿಯಲ್ಲಿ ಇಂದು ಮಾತೃಪೂರ್ಣ ಯೋಜನೆ ಜಾರಿಗೆ ತಂದಿದ್ದೇವೆ ಎಂದರು..
ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ನಾಯ್ಕ ಮಾತನಾಡಿ, ನಮ್ಮ ಸರಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಮಕ್ಕಳು ಸದೃಢವಾಗಿರಬೇಕು, ಸಶಕ್ತವಾಗಿರಬೇಕು ಎನ್ನುವ ದೃಷ್ಠಿಯಿಂದ ಮಾತೃಪೂರ್ಣ ಯೋಜನೆ ಶಿಶು ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಕಾರ್ಯರೂಪಕ್ಕೆ ಬರುತ್ತಿದೆ ಎಂದರು..
ಈ ವೇಳೆ ಬಾಣಂತಿಯರಿಗೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ವಿತರಿಸಲಾಯಿತು. ಈ ವೇಳೆ ಶಾಸಕರು, ತಹಶೀಲ್ದಾರ ಮೇಘರಾಜ ನಾಯ್ಕ, ಸಹಾಯಕ ಆಯುಕ್ತರಾದ ರಮೇಶ ಕಳಸದ್, ಪುರಸಭೆ ಅಧ್ಯಕ್ಷ ಸಂತೋಷ ನಾಯ್ಕ, ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ನಾಯ್ಕರವರು ಬಾಣಂತಿಯರಿಗೆ ಊಟ ಬಡಿಸಿದರು. ತಾಲೂಕ ವೈದ್ಯಾಧಿಕಾರಿಗಳಾದ ಆಜ್ಞಾ ನಾಯಕ, ಅನಿತಾ ಮಾಪಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಲಲಿತಾ ಪಟಗಾರ ಹಾಗೂ ಬಾಣಂತಿಯರು, ಅಂಗನವಾಡಿ ಕಾರ್ಯಕರ್ತರು, ಮಕ್ಕಳು ಉಪಸ್ಥಿತರಿದ್ದರು..