ಹೊನ್ನಾವರ : ತಾಲೂಕಿನ ಶರಾವತಿ ಸೇತುವೆ ಮೇಲೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಶರಾವತಿ ಸೇತುವೆಯ ಮೇಲೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವನಿಗೆ ಅಪರಿಚಿತ ವಾಹನವೊಂದು ಅತಿವೇಗದಿಂದ ಬಂದು ಡಿಕ್ಕಿಹೊಡೆದು ಪರಾರಿಯಾಗಿದೆ ಎನ್ನಲಾಗಿದ್ದು, ಮುಂಜಾನೆ 1 ಗಂಟೆಯಿoದ 2 ಗಂಟೆಯ ನಡುವಿನ ಅವಧಿಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಇಲ್ಲಿನ ಬಜಾರ್ ರೋಡ್ ನಿವಾಸಿ ಕಾರ್ತಿಕ್ ಶೇಟ್ ಇವರ ತಲೆಯ ಭಾಗಕ್ಕೆ ಗಂಭೀರ ಗಾಯ ಸಂಭವಿಸಿದ ಕಾರಣ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.