ಬೆಂಗಳೂರು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯದಂತೆ ಒಂದನೇ ತರಗತಿಗೆ ಸೇರಿಸಲು ಮಗುವಿಗೆ ಕಡ್ಡಾಯವಾಗಿ 6 ವರ್ಷ ವಯೋಮಿತಿ ನಿಗದಿ ಪಡಿಸಿ ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈ ಆದೇಶ 2025-26 ನೇ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರಲಿದ್ದು, ಜೂನ್ 1 ಕ್ಕೆ ಕಡ್ಡಾಯವಾಗಿ ಮಗುವಿಗೆ 6 ವರ್ಷ ತುಂಬಿರಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿ ರಾಜ್ಯದ ಎಲ್ಲಾ ಡಿಡಿಪಿಐ,ಬಿಇಒ ಹಾಗೂ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ. ಈ ಹಿಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು 5 ವರ್ಷ, 5 ತಿಂಗಳು ಹಾಗೂ 5 ವರ್ಷ 10 ತಿಂಗಳು ಆಗಿರಬೇಕು ಎಂಬ ನಿಯಮವಿತ್ತು. ಇದೀಗ ಆರ್‌ಟಿಇ ಶಿಕ್ಷಣ ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮ 2012 ಅನ್ವಯ ಹೊಸ ವಯೋಮಿತಿಯನ್ನು ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
6 ರಿಂದ 8ನೇ ತರಗತಿ ಮಕ್ಕಳಿಗೆ ಇನ್ಮುಂದೆ ಪ್ರಾಥಮಿಕ ಶಿಕ್ಷಕರಿಂದ ಭೋದನೆ.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನೇ 6 ರಿಂದ 8 ನೇ ತರಗತಿಯ ಪದವೀಧರ ಶಿಕ್ಷಕರ ನೇಮಕಾತಿಗೆ ಮುಂಬಡ್ತಿ ನೀಡಲು ರಾಜ್ಯ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೇ.40 ರಷ್ಟು ಪ್ರಾಥಮಿಕ ಶಿಕ್ಷಕರು ಮುಂಬಡ್ತಿ ಪಡೆದು 6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ.
6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿಯ ನಿಯಮದಲ್ಲಿ ಕೂಡ ಬದಲಾವಣೆ ಮಾಡಲು ಕೂಡ ಆರ್ಥಿಕ ಇಲಾಖೆ ಒಪ್ಪಿಕೊಂಡಿದೆ. ಹೀಗಾಗಿ 6 ರಿಂದ 8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕರ ವೃಂದದ ನೇಮಕಾತಿ ಶೇ. 60ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಯೋಜನೆ ಹಾಕಿಕೊಂಡಿದೆ. ಉಳಿದ ಶೇ. 40ರಷ್ಟು ಹುದ್ದೆಗಳು ಸೇವಾನಿರತ ಪ್ರಾಥಮಿಕ ಶಿಕ್ಷಕರನ್ನು ಮುಂಬಡ್ತಿ ಮಾಡುವ ಮೂಲಕ ಭರ್ತಿಯಾಗಲಿದೆ. ಈ ಎಲ್ಲಾ ಯೋಜನೆಗಳಿಗೆ ರಾಜ್ಯ ಸರಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.
- ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿ.
- ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಉಜ್ವಲ ಭವಿಷ್ಯಕ್ಕೆ ಪೂರಕವಾಗಿದ್ದು, ಇದರ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.