ಅಂಕೋಲಾ : ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ LPG ಗ್ಯಾಸ್ ಟ್ಯಾಂಕರ್ ದಾರಿ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆಲಕಾಲ ಸುತ್ತಲ ಜನರಲ್ಲಿ ಆತಂಕ ಮೂಡಿಸಿದ ಘಟನೆ ಅಂಕೋಲಾ ಸಮೀಪ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮಂಗಳವಾರ ಸಂಭವಿಸಿದೆ. ಅದೃಷ್ಟ ವಶಾತ್ ಯಾವುದೇ ಪ್ರಾಣಹಾನಿ ಇಲ್ಲವೇ ಗ್ಯಾಸ್ ಸೋರಿಕೆಯಾಗದೇ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಂಕೋಲಾ ಪಿ ಎ ಸೈ ಪ್ರೇಮನಗೌಡ ಪಾಟೀಲ್, ಸುಂಕಸಾಳ ಓ. ಪಿ. ಹಾಗೂ ಇತರೆ ಪೊಲೀಸ್ ಸಿಬ್ಬಂದಿಗಳು, ಅಗ್ನಿಶಾಮಕ ದಳ, 112 ವಾಹನ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿ ಕರ್ತವ್ಯ ನಿರ್ವಹಿಸಿ ಪರಿಸ್ಥಿತಿ ಸರಿದೂಗಿಸಿದರು.
ಟ್ಯಾಂಕರ್ ರಸ್ತೆ ಅಂಚಿಗೆ ಹೊರಳಿ ಬಿದ್ದಿರುವುದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತರೆ ವಾಹನಗಳ ಸಂಚಾರಕ್ಕೆ ತೊಡಕಾಗಿಲ್ಲ ಎನ್ನಲಾಗಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ಸಂಚರಿಸುವ ಹಲವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಉತ್ತರಕನ್ನಡದ ಬೇರೆ ಬೇರೆ ಕಡೆಗಳಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯ ಬಗ್ಗೆ ಸುದ್ದಿಯಾಗುತ್ತಿರುವುದು. ಸುತ್ತಲ ಜನತೆಗೆ ಗೊಂದಲ ಉಂಟುಮಾಡಿದೆ.