ಕುಮಟಾ : ಪರೇಶ ಮೇಸ್ತನ ಪ್ರಕರಣದ ಲಾಭ ಪಡೆದ ಬಿಜೆಪಿ, ಬೆಲೆ ಏರಿಕೆ, ಬಡವರಿಗೆ ಅನ್ಯಾಯ ಮಾಡುತ್ತಿರುವುದು ಸೇರಿದಂತೆ ವಿವಿಧ ಲೋಪ-ದೋಷಗಳನ್ನು ಜನರ ಮುಂದಿಡಲು ನ.24 ರಂದು ಬೆಳಿಗೆ 10.30 ರಿಂದ ಮಧ್ಯಾಹ್ನದ ವರೆಗೆ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಕೆ.ಪಿ.ಸಿ. ಸಿ ಉಪಾಧ್ಯಕ್ಷ ಐವನ್ ಡಿಸೋಜಾ ತಿಳಿಸಿದರು.‌ ಅವರು ಪಕ್ಷದ ಪ್ರಮುಖರ ಜೊತೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪರೇಶ್ ಮೇಸ್ತಾನ ಸಾವಿನ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡು ಬರೀ ಸುಳ್ಳುಗಳನ್ನೆ ಹೇಳಿ ಜನರ ಭಾವನೆಗಳ ಜೊತೆಗೆ ಆಟವಾಡಿದ ಬಿಜೆಪಿಗರ ಬಣ್ಣ ಬಯಲು ಮಾಡುವ ಉದ್ದೇಶದಿಂದಲೇ ನ.24ರಂದು ಮಣಕಿ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ಅವರು ತಿಳಿಸಿದರು.

ಹೊನ್ನಾವರದ ಪರೇಶ ಮೇಸ್ತ ಸಾವಿನ ಪ್ರಕರಣವನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿಸಿಕೊಂಡು ಅಧಿಕಾರ ಅನುಭವಿಸುತ್ತಿದೆ. ಪರೇಶ ಮೇಸ್ತ ಸಾವಿನ ನಂತರ ಜಿಲ್ಲೆಯಾದ್ಯಂತ 67 ವಿವಿಧ ಸೆಕ್ಷನ್‌ಗಳಲ್ಲಿ 2988 ಜನರ ವಿರುದ್ಧ ಪ್ರಕರಣ ದಾಖಲಾಗಿ, 361 ಜನರನ್ನು ಪೊಲೀಸರು ಬಂಧಿಸಿದ್ದರು.272 ಜನರ ಮೇಲೆ ರೌಡಿ ಶೀಟರ್ ಪ್ರಕರಣ ದಾಖಲಾಗಿ,1699 ಜನರ ವಿರುದ್ಧ ಪೊಲೀಸರು ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಇದರಿಂದ ಅನೇಕ ಯುವಕರ ಕುಟುಂಬಗಳು ಬೀದಿ ಪಾಲಾಗಿತ್ತು. ಈ ಪ್ರಕರಣವನ್ನು ರಾಜಕೀಯ ದುರುದ್ದೇಶ ಪಡೆದ ಬಿಜೆಪಿ, ಇದು ಸಹಜ ಸಾವಲ್ಲ. ಅನ್ಯಕೋಮಿನವರು ಹೊಡೆದು ಕೊಲೆ ಮಾಡಿದ್ದಾರೆ ಎಂದು ಬಿಂಬಿಸಿ ರಾಜ್ಯಾದ್ಯಂತ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

RELATED ARTICLES  ಹೆಬ್ಬಾರ್ ಡ್ರೀಮ್ ಫೌಂಡೇಶನ್ ವತಿಯಿಂದ ನೋಟ್ ಬುಕ್ ವಿತರಣೆ

ಸುಳ್ಳಿನ ಕಂತೆ ಸೃಷ್ಟಿಸಿದ್ದರಿಂದ ಕರಾವಳಿ ಭಾಗದಲ್ಲಿ ಬಜೆಪಿ ಶಾಸಕರು ಆಯ್ಕೆಯಾಗಿದ್ದರು. ಪರೇಶ ಮೇಸ್ತ ಸಾವಿನ ಫಲಾನುಭವಿಗಳಾದ ಬಿಜೆಪಿ ಶಾಸಕರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣವನ್ನು ಸಿ.ಐ.ಡಿ ತನಿಖೆ ಒಪ್ಪಿಸಿದಾಗ ಬಿಜೆಪಿ ಮುಖಂಡರು ಪ್ರತಿಭಟಿಸಿ, ಸಿ.ಬಿ.ಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಆ ನಂತರ ಪ್ರಕರಣವನ್ನು ಸಿ.ಬಿ.ಐಗೆ ವಹಿಸಲಾಗಿತ್ತು. ಸುಧೀರ್ಘ 5 ವರ್ಷ ತನಿಖೆ ನಡೆಸಿದ ಸಿ.ಬಿ.ಐ ತನಿಖಾ ಸಂಸ್ಥೆಯು ಪರೇಶ ಮೇಸ್ತನದ್ದು, ಕೊಲೆಯಲ್ಲ, ಸಹಜ ಸಾವು ಎಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಇದರಿಂದ ಬಿಜೆಪಿಯ ಮುಖವಾಡ ಕಳಚಿಂತಾಗಿದೆ ಎಂದು ವಾಗ್ದಾಳಿ ನಡೆಸಿದ ಡಿಸೋಜಾ, ಬಿಜೆಪಿ ಮುಖವಾಡವನ್ನು ಜನರ ಬಳಿ ತೆರೆದಿಡಲು ಸಮಾನತೆ ಮತ್ತು ಸೌಹಾರ್ದತೆ ಎಂಬ ಧೈಯ ವಾಕ್ಯದೊಂದಿಗೆ ಕಾಂಗ್ರೆಸ್ ಪಕ್ಷದಿಂದ ಬೃಹತ್ ರಾಜ್ಯ ಮಟ್ಟದ ಸಮಾವೇಶ ಇಲ್ಲಿ ಹಮ್ಮಿಕೊಂಡಿದ್ದೇವೆ ಎಂದರು.

RELATED ARTICLES  ಹುಳ ಹಿಡಿದಿದೆ 300 ಕ್ವಿಂಟಲ್ ಬೇಳೆ-ಕಾಳು: ಹುಟ್ಟಿದೆ ನೂರಾರು ಅನುಮಾನ

ಈ ಸುದ್ದಿಗಳನ್ನೂ ಓದಿ.

ಸಮಾವೇಶದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಉಸ್ತುವಾರಿ ಸುರ್ಜೇವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಮಾಜಿ ಸಚಿವ ಹಾಗೂ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ,ಮಾಜಿ ಸಚಿವರು, ಹಾಲಿ ಶಾಸಕರು ಸೇರಿದಂತೆ ಸುಮಾರು 67 ರಾಜ್ಯದ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಅಲ್ಲದೇ ರಾಜ್ಯದ ವಿವಿಧ ಜಿಲ್ಲೆ, ತಾಲೂಕುಗಳಿಂದ ಸುಮಾರು 50 ಸಾವಿರ ಕಾರ್ಯಕರ್ತರು ಭಾಗವಹಿಸುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕರಾದ ಶಾರದಾ ಶೆಟ್ಟಿ, ಮಂಕಾಳು ವೈದ್ಯ, ಸತೀಶ ಸೈಲ್, ಪ್ರಮುಖರಾದ ರಮಾನಂದ ನಾಯಕ, ಎಸ್.ಕೆ.ಭಾಗ್ವತ, ಸಾಯಿ ಗಾಂವಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ, ಯುವ ಮುಖಂಡ ರವಿಕುಮಾರ ಶೆಟ್ಟಿ, ನಾಗೇಶ ನಾಯ್ಕ ಸೇರಿದಂತೆ ಹಲವರಿದ್ದರು.