ಶಿರಸಿ : ಹಣ್ಣು ತರಕಾರಿ ವ್ಯಾಪಾರದ ನೆಪದಲ್ಲಿ ಬಸ್ ಹತ್ತುವ ಇಳಿಯುವವರ ಪಿಕ್ ಪಾಕೆಟ್ ಮಾಡುತ್ತಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಯಾಣಿಕನೊಬ್ಬನ ಕಿಸೆ ಕತ್ತರಿಸಿ 75 ಸಾವಿರ ರೂಪಾಯಿ ಹಣ ಕದ್ದ ಘಟನೆ ಇಲ್ಲಿನ ಹಳೆ ಬಸ್ ನಿಲ್ದಾಣದ ಸಮೀಪ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES  ನಾಳೆ ಉತ್ತರಕನ್ನಡಕ್ಕೆ ಬರ್ತಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬಂಧಿತ ಆರೋಪಿಯನ್ನು ಹುಬ್ಬಳ್ಳಿ ಮೂಲದ ಮಹೇಶ್ ಸಾತಪ್ಪ ಕಾಳೆ ಎಂದು ಗುರುತಿಸಲಾಗಿದೆ. ಬಂಧಿತನಿoದ 60 ಸಾವಿರ ಹಣವನ್ನು ವಶಕ್ಕೆ ಪಡೆದಿದ್ದಾರೆ. ನವೆಂಬರ್ 11 ರಂದು ನಗರದ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತಿದ್ದ ಸುರೇಶ್ ಮಂಜಪ್ಪ ಎಂಬುವವರಿoದ ಹಣ ಕಳ್ಳತನವಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿತ್ತು.

RELATED ARTICLES  ಉಕ್ರೇನ್ ಸಂತ್ರಸ್ತ ವಿದ್ಯಾರ್ಥಿಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ

ಸಿಸಿಟಿವಿ ದೃಶ್ಯವನ್ನು ಕಲೆಹಾಕಿದ ಪೊಲೀಸರು ಆರೋಪಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಎನ್ನಲಾಗಿದೆ. ಡಿವೈಎಸ್ಪಿ ರವಿ ನಾಯ್ಕ, ಸಿಪಿಐ ರಾಚಂದರ ನಾಯಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.