ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜ್ಯುಕೇಶನ ಟ್ರಸ್ಟನ ಬಿ.ಕೆ.ಭಂಡಾರಕರ್ಸ ಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಸ್ತುತ ಪಡಿಸುವ ಪ್ರತಿಭಾ ಪ್ರದರ್ಶನವನ್ನು “ಕಲಾಂಜಲಿ” ಎಂಬ ಹೆಸರಿನಲ್ಲಿ ನಡೆಸಲಾಯಿತು. ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳು ನಡೆಯದೆ ಇರುವುದರಿಂದ ಮಕ್ಕಳಲ್ಲಿ ಅವಿತಿರುವ ಪ್ರತಿಭೆಯನ್ನು ಪ್ರದರ್ಶನ ಮಾಡಲು ವೇದಿಕೆ ಸಿಗದಿರುವುದನ್ನು ಅರಿತು ಕಾಲೇಜಿನಲ್ಲಿ ಇತ್ತೀಚೀಗೆ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಪ್ರದರ್ಶಿಸುವ ಉದ್ದೇಶದಿಂದ ಸಾಂಸ್ಕೃತಿಕ ಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು ಭರತನಾಟ್ಯ ,ಕೊಳಲು ವಾದನ ,ಜಾನಪದ ನೃತ್ಯ, ಮಿಮಿಕ್ರಿ, ಹಾಡು, ಮೂಕಾಭಿನಯ, ಸಾಮೂಹಿಕ ನೃತ್ಯ ಇತ್ಯಾದಿ ಸಾಂಸ್ಕೃತಿಕ ಕಲಾ ಪ್ರದರ್ಶನವನ್ನು ನೀಡಿದರು.
ಈ ಸಂದರ್ಭದಲ್ಲಿ ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕರಾದ ಶ್ರೀ ಗುರುರಾಜ ಶೆಟ್ಟಿ, ಪ್ರಾಂಶುಪಾಲರಾದ ಶ್ರೀ ಕಿರಣ ಭಟ್ಟ, ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತಾ ಹೆಗಡೆ ಹಾಗೂ ಬೋಧಕ ಭೋದಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಜರಿದ್ದರು.