ಕುಮಟಾ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉತ್ತರಕನ್ನಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಸಹಯೋಗದೊಂದಿಗೆ ಎಸ್.ಕೆ.ಪಿ ಕತಗಾಲದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡ ಇವರ ಮಾರ್ಗದರ್ಶನದಲ್ಲಿ ಶಿವಪ್ರಸಾದ ಆರ್ ನಾಯಕ ಮೊಗಟಾ ಇವರು ಇಂಜಿನಿಯರಿAಗ ಮತ್ತು ಕಂಪ್ಯೂಟರ್ ಉಪವಿಷಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಹಾಗೂ ಎನ್.ವಿ ಶ್ರೀನಾಗ ಹಿರೇಗುತ್ತಿ ಮತ್ತು ರಜತ ಎನ್ ನಾಯಕ ಮೊಗಟಾ ಇವರು ರಸಾಯನಶಾಸ್ತç ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

RELATED ARTICLES  ಶಾಸಕರ‌ ಹಸ್ತಕ್ಷೇಪದಿಂದ ಕೂಲಿ ಕಾರ್ಮಿಕರ ಕಿಟ್ ವಿತರಣೆಯಲ್ಲಿ ಅವ್ಯವಹಾರ : ಜೆ.ಡಿ.ಎಸ್ ಆರೋಪ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಮಹಾತ್ಮ ಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ನಾಯಕ, ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯೋಪಾಧ್ಯಾಯರಾದ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು, ಆಶ್ರಯ ಫೌಂಡೇಶನ್ ಅಧ್ಯಕ್ಷರಾದ ರಾಜೀವ ಗಾಂವಕರ, ಗ್ರಾಮ ಪಂಚಾಯತ ಅಧ್ಯಕ್ಷರಾದ ನಾಗರತ್ನ ಗಾಂವಕರ, ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಶಾಂತಾ ಎನ್ ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀಲಕಂಠ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ಜಗದೀಶ ನಾಯಕ. ಸ್ಪಂದನ ಫೌಂಡೇಶನ್‌ನ ಎನ್. ರಾಮು ಹಿರೇಗುತ್ತಿ, ಊರ ನಾಗರಿಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆೆ(ಉ.ಕ), ಕೇತ್ರ ಶಿಕ್ಷಣಾಧಿಕಾರಿಗಳು ಕುಮಟಾ ಇವರು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿದರು.

RELATED ARTICLES  ಕುಮಟಾದ 'ಕಲ್ಯಾಣ ಕ್ಲಿನಿಕ್' ನಲ್ಲಿ ತಜ್ಙ ಯುವ ವೈದ್ಯ ಡಾ.ಭರತ್ ಶೇಟ್ ಇವರ ಸೇವೆ ಆರಂಭ.

ವರದಿ: ಎನ್ ರಾಮು ಹಿರೇಗುತ್ತಿ