ಕಾರವಾರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಇಲಾಖೆಯ ಯೋಜನೆ ಹಾಗೂ ಸೇವೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸವ ನಿಟ್ಟಿನಲ್ಲಿ ಜಾನಪದ ಕಲಾ ತಂಡಗಳ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಾನಪದ ಕಲಾತಂಡಗಳು ಜಿಲ್ಲೆಯ ವ್ಯಾಪ್ತಿಯಲ್ಲಿರಬೇಕು, ಸಂಗೀತ ಮತ್ತು ನಾಟಕ ವಿಭಾಗ ಮಾಹಿತಿ ಮತ್ತು ಪ್ರಸಾರ ಮಂತ್ರಾಲಯ, ಭಾರತ ಸರಕಾರ ಬೆಂಗಳೂರು ಕೇಂದ್ರದಲ್ಲಿ ನೋಂದಾವಣೆಯಾಗಿರಬೇಕು ಹಾಗೂ ವಾರ್ತಾ ಮತ್ತು ಜನಸಂಪರ್ಕ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತ ಇಲಾಖೆಗಳಲ್ಲಿ ನೋಂದಣಿಯಾಗಿರಬೇಕು. ಇಲಾಖೆಗಳಲ್ಲಿ ನೋಂದಾವಣೆಯಾಗದೇ ಇರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಆಯ್ಕೆಯಾದ ಕಲಾ ತಂಡಗಳು ಜಿಲ್ಲೆಯಾದ್ಯಂತ ತಮ್ಮ ಪ್ರಕಾರಗಳಲ್ಲಿ ಕಾರ್ಯಕ್ರಮ ನೀಡಲು ಸಿದ್ಧರಿರಬೇಕು.
ಆಸಕ್ತ ಕಲಾತಂಡಗಳು ತಮ್ಮ ತಂಡದ ಪ್ರಕಾರ ಹಾಗೂ ನೋಂದಣಿ ದಾಖಲೆ ಪ್ರತಿಗಳೊಂದಿಗೆ ನವೆಂಬರ್ 25ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯ ಆರೋಗ್ಯ ಶಿಕ್ಷಣ ವಿಭಾಗಕ್ಕೆ ಸಲ್ಲಿಸಬೇಕು. ನಂತರದಲ್ಲಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9845198326 ಗೆ ಸಂಪರ್ಕಿಸಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರದ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳನ್ನು (ಮೊ.ಸಂ: 9845198326) ಸಂಪರ್ಕಿಸಬಹುದು.