ಕಾರವಾರ: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಯೋಜನೆಯಡಿ ಪೋಸ್ಟಮೆಟ್ರಿಕ್ ಹಾಗೂ ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಪಿಯುಸಿ (11ನೇ ತರಗತಿ) ನಂತರದ ಉನ್ನತ ವ್ಯಾಸಂಗ ಮಾಡುತ್ತಿರುವ ಹಾಗೂ ಕಡ್ಡಾಯವಾಗಿ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳು ಡಿಸೆಂಬರ್ 31 ರ ಒಳಗಾಗಿ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜು ಶಿಕ್ಷಣ ಸಂಸ್ಥೆಗಳ ಮುಖಾಂತರ ವೆಬ್‌ಸೈಟ್ https://ssp.postmatric.karnataka.gov.in ನ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ, ಮೂಲ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲಭವನ ಬಿಲ್ಡಿಂಗ್, ಎಂ.ಜಿ.ರಸ್ತೆ, ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382200758 ಗೆ ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ದಾಂಡೇಲಿಯಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ