ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ಬಿ.ಕೆ.ಭಂಡಾರಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮುರುಡೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶವಾಗಿ ನಡೆದ ಸ್ಪರ್ಧೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾಗಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ಎಲ್ಲಾ ಚಟುವಟಿಕೆಗಳಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅದ್ವೈತ ಮತ್ತು ರಾಘವೇಂದ್ರ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಆಂಡ್ರಿಯಾ ಪ್ರಥಮ ಸ್ಥಾನ, ಚಿತ್ರಕಲೆಯಲ್ಲಿ ಸೋನಾಲಿ, ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಆಂಡ್ರಿಯಾ ವೆಲ್ಲಾಡೂ ದ್ವಿತೀಯ ಸ್ಥಾನ ಪಡೆದಿದ್ದಾರೆ. ಆಶುಭಾಷಣ ಸ್ಪರ್ಧೆಯಲ್ಲಿ ವಾಣಿಜ್ಯ ವಿಭಾಗದ ಮನಾಬ್ ತೃತೀಯ ಸ್ಥಾನ ಗಳಿಸಿದ್ದಾಳೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪ್ರಾಪ್ತಿ ಮತ್ತು ರಾಹುಲ್ ಪ್ರಥಮ ಸ್ಥಾನವನ್ನು ಪಡೆದಿದ್ದು, ಏಕಪಾತ್ರಾಭಿನಯದಲ್ಲಿ ಶುಭಾ, ಜಾನಪದ ಗೀತೆಯಲ್ಲಿ ಅಕ್ಷತಾ, ಆಶುಭಾಷಣದಲ್ಲಿ ಅನನ್ಯಾ, ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲರಾದ ಕಿರಣ ಭಟ್ಟ, ಉಪ ಪ್ರಾಂಶುಪಾಲೆ ಸುಜಾತಾ ಹೆಗಡೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.