ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ಮಳೆಯ ಶಾಕ್ ಎದುರಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನ.27 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಮಾತ್ರವಲ್ಲದೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

RELATED ARTICLES  ಏಡ್ಸ್ ನಿರ್ಮೂಲನಾ ದಿನಾಚರಣೆ

ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುರುವಾರವೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಕೊಡಗು ಪ್ರದೇಶಗಳಲ್ಲೂ ಜೋರು ಮಳೆಯಾಗಲಿದೆ.

RELATED ARTICLES  ಭಾವಿಶಿಕ್ಷಕರು ಯುವಶಕ್ತಿಯ ಸಬಲೀಕರನದಕುರಿತು ಚಿಂತನೆ ನಡೆಸಬೇಕು ಡಾ.ನರಸಿಂಹಮೂರ್ತಿ