ಬೆಂಗಳೂರು: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಅವರು ನಿರ್ದಿಷ್ಯ ವ್ಯಕ್ತಿಗಳ ಮೇಲೆ ವಾಗ್ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಮಂಗಳವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್.ಪ್ರಕಾಶ್ ಅವರು, ಪ್ರಕಾಶ್ ರಾಜ್ ಅವರು ಹುಸಿ-ಉದಾರವಾದಿ ವ್ಯಕ್ತಿಯಂತೆ ವರ್ತಿಸುತ್ತಿದ್ದಾರೆ. ಗೌರಿ ಲಂಕೇಶ್ ಅವರ ಹತ್ಯೆಯಾಗಿ 1 ತಿಂಗಳು ಕಳೆಯುತ್ತಿದೆ. ಆದರೂ, ಹತ್ಯೆ ಕುರಿತಂತೆ ಸಣ್ಣ ಸುಳಿವು ಕೂಡ ದೊರಕಿಲ್ಲ. ಕಲಬುರ್ಗಿಯವರ ಹತ್ಯೆಯಾಗಿ 2 ವರ್ಷ ಕಳೆದಿದೆ. ಈಗಲು ಹಂತಕರು ಯಾರೆಂಬುದು ತಿಳಿದಿಲ್ಲ. ಪರಿಸ್ಥಿತಿ ಹೀಗಿರುವಾಗ ಕರ್ನಾಟಕ ಸರ್ಕಾರದ ವಿರುದ್ಧ ಒಂದು ಮಾತನ್ನೂ ಆಡದ ಪ್ರಕಾಶ್ ರಾಜ್ ಅವರು ನೇರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.

RELATED ARTICLES  ಕುಮಟಾ, ಹೊನ್ನಾವರದಲ್ಲಿ ಕೊರೋನಾ ಲಸಿಕೆ ವಿತರಣಾ ಮಾಹಿತಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಪ್ರಕಾಶ್ ರಾಜ್ ಅವರು ಕೀಳುಮಟ್ಟದ ಪ್ರಚಾರ ತಂತ್ರವನ್ನು ಉಪಯೋಗಿಸುತ್ತಿದ್ದಾರೆಂದು ತಿಳಿಸಿದ್ದಾರೆ.