ಕುಮಟಾ: ತಾಲೂಕಿನ ಬರ್ಗಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ೧೦ನೇ ತರಗತಿಯಲ್ಲಿ ಓದುತ್ತಿರುವ ಆದಿತ್ಯ ವಿವೇಕ ಪಟಗಾರರವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕಾರವಾರದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ವಿಜೇತರಾಗಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ ನಡೆಯುವ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಭಾಗವಹಿಸುತ್ತಿದ್ದಾರೆ. ಅವರಿಗೆ ಶಾಲೆಯ ಸಂಸ್ಕೃತ ಅಧ್ಯಾಪಕರಾದ ಮಂಜುನಾಥ ಗಾಂವಕರ್ ಬರ್ಗಿ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಾದ ಯಶೋಧಾ ಕೆ.ಬಿ. ಯವರು ಮಾರ್ಗದರ್ಶನವನ್ನು ನೀಡಿದ್ದರು. ಅವರನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಮುರಳೀಧರ ನಾಯ್ಕ್, ಮುಖ್ಯಾಧ್ಯಾಪಕರಾದ ಮಧುಕೇಶ್ವರ ನಾಯ್ಕ ಹಾಗೂ ಶಿಕ್ಷಕ-ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

RELATED ARTICLES  ಹೊನ್ನಾವರ : ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ