ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಳೆದ ಗುರುವಾರ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಕುಮಟಾದ ಮಣಕಿ ಮೈದಾನದಲ್ಲಿ ಏರ್ಪಡಿಸಿದ್ದ, ಜನಜಾಗೃತಿ ಸಮಾವೇಶವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಯಲು ಕಾರಣೀಕರ್ತರಾದ ಕುಮಟಾ-ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಶ್ರಮವನ್ನು, ಸಮಾವೇಶದ ಬಳಿಕ ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಕ್ತಕಂಠದಿಂದ ಶ್ಲಾಘಿಸಿದರು. ಅಲ್ಲಿಯೇ ಉಪಸ್ಥಿತರಿದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ಮತ್ತು ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಲ್.ನಾಯ್ಕ ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಅಭಿನಂಧಿಸಿದರು.

RELATED ARTICLES  ಗೃಹ ಲಕ್ಮೀ ಮತ್ತು ಗೃಹ ಜ್ಯೋತಿ ಯೋಜನೆಯ ಗ್ಯಾರಂಟಿ ಕಾರ್ಡ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ.