ಹೊನ್ನಾವರ: ಪುರಾಣ ಪ್ರಸಿದ್ಧ ಹಾಗೂ ನಾಗಾರಾಧನೆಯ ಪುಣ್ಯ ತಾಣವೆಂದೇ ಪ್ರಸಿದ್ಧಿ ಹೊಂದಿರುವ ಹೊನ್ನಾವರ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲದಲ್ಲಿ ಚಂಪಾ ಷಷ್ಠಿಯ ನಿಮಿತ್ತ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಮಂಗಳವಾರ ವಿಜೃಂಭಣೆಯಿಂದ ನೇರವೇರಿತು. ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರಿಂದ ಹಣ್ಣು- ಕಾಯಿ ಸೇವೆ, ಅರ್ಚನೆ, ಆರತಿ, ಅಭಿಷೇಕ, ಸರ್ವ ಸೇವೆ, ಅಪೂಪ ಸೇವೆ, ಪಂಚಖಾದ್ಯ ಸೇವೆ, ಲಾಡು ಪ್ರಸಾಸ ಸೇವೆ ಸೇರಿದಂತೆ ವಿವಿಧ ಸೇವೆಯನ್ನು ಸಲ್ಲಿಸಿದರು.

RELATED ARTICLES  ಹಂದಿಗೋಣ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮೀಪದ ನಾಗಬನದಲ್ಲಿರುವ ನಾಗ ದೇವರಿಗೆ ಕ್ಷೀರಾಭಿಷೇಕ, ಆರತಿ ಮತ್ತು ಫಲಾಭಿಷೇಕ ಸೇರಿದಂತೆ ವಿವಿಧ ಸೇವೆ ಸಲ್ಲಿಸಲಾಯಿತು. ಮುಂಜಾನೆ 6 ಗಂಟೆಯಿಂದ ದೇಗುಲದಲ್ಲಿ ದರ್ಶನ ಆರಂಭವಾಗಿದ್ದು, ರಾತ್ರಿ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತರು ಸರತಿ ಸಾಲಿನಲ್ಲಿ ದರ್ಶನ ಪಡೆಯುವುದಕ್ಕಾಗಿ ಪೆಂಡಾಲ್ ವ್ಯವಸ್ಥೆ, ಅಲ್ಲಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದರು.

RELATED ARTICLES  ಮಾವಿನಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತ ದೇಹ ಪತ್ತೆ

ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕರಾದ ಮಂಕಾಳ ವೈದ್ಯ, ಶಾರದಾ ಶೆಟ್ಟಿ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ನಾಡಿನ ಮೂಲೆಮೂಲೆಯಿಂದ ಆಗಮಿಸಿದ ಸಾವಿರಾರು ಭಕ್ತರು ಇಷ್ಟಾರ್ಥ ಪ್ರಾಪ್ತಿಗಾಗಿ ಸಂಕಲ್ಪಿಸಿಕೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.