ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ತಮ್ಮಬಿಡುವಿಲ್ಲದ ಕಾರ್ಯದ ನಡುವೆಯೂ ಮಡದಿಗೆ ಬಳೆ ಖರೀದಿಸುವ ಮೂಲಕ ಗಮನ ಸೆಳೆದಳು. ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಸಂಧ್ಯಾ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಂತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ ತಮ್ಮಮಡದಿಗೆ ಇಷ್ಟವಾದ ಬಣ್ಣದ ಬಳೆ ಖರೀದಿಸಿ ಪತ್ನಿ ಮೇಲಿನ ಪ್ರೀತಿ ತೋರಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಪ್ರಮುಖರಾದ ದೇವು ಪಾಟೀಲ್, ಕೆ.ಸಿ.ಗಲಭಿ, ಸಿದ್ದಪ್ಪ ಹಡಪದ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.