ಕುಮಟಾ : ಸ್ಥಳೀಯ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಮತದಾನದ ಕುರಿತು ಜಾಗೃತಿ ಜಾಥ ನಡೆಯಿತು. ವಿದ್ಯಾನಿಕೇತನ ಸಂಸ್ಥೆಯ ಸದಸ್ಯರಾದ ಶ್ರೀ ಜಿ ವಿ ಹೆಗಡೆ ಬಾವುಟ ಪ್ರದರ್ಶಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾನ ಇಂದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಈ ಮಹತ್ವದ ಕಾರ್ಯದಲ್ಲಿ ಪಾಲ್ಗೊಳ್ಳಲೇಬೇಕು. ಪ್ರಜ್ಞಾವಂತರಾದ ನಾವು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹೊಣೆಗಾರಿಕೆಯನ್ನು ಅರಿತು ಪ್ರತಿಯೊಬ್ಬರೂ ಮತದಾನ ಮಾಡಬೇಕು. ಯಾವುದೇ ಆಮಿಷಕ್ಕೆ ಒಳಗಾಗದೆ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಬೇಕು, ಆ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ಕಾರಣವಾಗಬೇಕೆಂದು ಅವರು ಕರೆ ನೀಡಿದರು.

RELATED ARTICLES  ಉತ್ತರಕನ್ನಡ ಜಿಲ್ಲಾದ್ಯಂತ ಡಿ.21ರ ತಡರಾತ್ರಿ 12 ವರೆಗೆ ಜಿಲ್ಲೆಯಲ್ಲಿ ಕಲಂ 144

ಇದೇ ಸಂದರ್ಭದಲ್ಲಿ ಶಾಲಾ ಚುನಾವಣಾ ಸಾಕ್ಷರತಾ ಕ್ಲಬ್ ನ ಸಂಚಾಲಕ ಶಿಕ್ಷಕ ಮನೋಹರ ಹರಿಕಂತ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಮುಖ್ಯಾಧ್ಯಾಪಕ ಅರುಣ್ ನಾಯ್ಕ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ತಿಳಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಊರ ನಾಗರಿಕರು ಈ ಜಾಥಾದಲ್ಲಿ ಪಾಲ್ಗೊಂಡು ಮೂರೂರು ಪಂಚಾಯತ್ ಭಾಗದಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಶಾಲಾ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಜನರ ಮೆಚ್ಚುಗೆ ವ್ಯಕ್ತವಾಯಿತು.

RELATED ARTICLES  ಜಾನುವಾರುಗಳ ಕಳ್ಳ ಸಾಗಾಣಿಕೆ : 8 ಜಾನುವಾರು ಪೊಲೀಸ್ ವಶಕ್ಕೆ.