ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್​ಸಿಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ಪ್ರಕಟಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.

2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅ.29 ಪ್ರಕಟಿಸಿತ್ತು. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಿದ್ದು, ಈ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದರೆ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತ್ತು. ಇದೀಗ ಅಂತಿಮವಾಗಿ ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಫೈನಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

RELATED ARTICLES  ಮಿರ್ಜಾನಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧೆ : ಭಾಗವಹಿಸಲು ಆಹ್ವಾನ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿರುವ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದು, ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ ಎನ್ನುವ ವೇಳಾಪಟ್ಟಿ ಇಂತಿದೆ.

RELATED ARTICLES  ರೈಲ್ವೆಯಲ್ಲಿ 19,952 ಹುದ್ದೆಗಳಿಗೆ ಅರ್ಜಿ ಆಹ್ವಾನ
FjNdk9NUcAAfi11
FjNdmYQUcAAm36A