ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆಜಿಎಫ್​ ಸಿನಿಮಾ ಖ್ಯಾತಿಯ ತಾತ ಕೃಷ್ಣ ರಾವ್ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಯಲ್ಲಿ ಕೃಷ್ಣ ರಾವ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

RELATED ARTICLES  ಬಂಧನಕ್ಕೊಳಗಾದ ಖ್ಯಾತ ಚಿತ್ರ ನಟ ದುನಿಯಾ ವಿಜಯ್: ಪೋಲೀಸರೆದುರೇ ದರ್ಪ ತೋರಿದರಂತೆ!

ನಾಳೆ ಬೆಳಗ್ಗೆ 11:00 ಘಂಟೆಗೆ ಸೀತಾ ಸರ್ಕಲ್​ನಲ್ಲಿರುವ ಕೃಷ್ಣ ಅವರ ಅಣ್ಣನ ಮನೆ ಬಳಿಯ ಸ್ಮಶಾನದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

ಕೃಷ್ಣ ರಾಮ್​ ಅವರು ನಟ ಶಂಕರ್​ ನಾಗ್​ ಕಾಲದಿಂದಲೂ ಕನ್ನಡ ಚಿತ್ರರಂಗದಲ್ಲಿದ್ದರು. ಆದರೆ ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿದ ನಂತರ ಕೃಷ್ಣ ರಾವ್ ಅವರು ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದರು.

RELATED ARTICLES  ನಿಮ್ಮ ರಾಶಿಯ ಪ್ರಕಾರ ನಿಮ್ಮ ಇಂದಿನ ದಿನ ಹೇಗಿರಲಿದೆ ಗೊತ್ತಾ? ದಿನಾಂಕ 28-10-2018 ರ ರಾಶಿ ಭವಿಷ್ಯ ಇಲ್ಲಿದೆ.

ಕೆಜಿಎಫ್ 2 ಚಿತ್ರದಲ್ಲಿನ ಅವರ ಡೈಲಾಗ್​ಗೆ ಫ್ಯಾನ್ಸ್​ ಫಿದಾ ಆಗಿದ್ದರು. ಚಿತ್ರದಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಳ್ಳದಿದ್ದರು ಅವರ ಪಾತ್ರ ಮತ್ತು ಡೈಲಾಗ್​ನಿಂದ ಫ್ಯಾನ್ಸ್​ಗಳಿಗೆ ಇಷ್ಟವಾಗಿದ್ದರು.