ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಅವರ ಪೆರೋಲ್ ಅರ್ಜಿಯನ್ನು ಕಾರಾಗೃಹ ಇಲಾಖೆ ಮಂಗಳವಾರ ತಿರಸ್ಕರಿಸಿದೆ.

ಪತಿಯ ಅನಾರೋಗ್ಯದ ಕಾರಣ ನೀಡಿ 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಕೋರಿ ಶಶಿಕಲಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ತನಿಖಾ ಹಂತದಲ್ಲಿರುವುದರಿಂದ ಪೆರೋಲ್ ನೀಡಲು ಬರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES  ಸಂಪೂರ್ಣವಾಗಿ ಧ್ವಂಸವಾಗಿದೆ ಜೈಷ್ ಎ ಮೊಹಮ್ಮದ್ ಕ್ಯಾಂಪ್ : ಪಾಕ್ ಗೆ ಪ್ರತ್ಯುತ್ತರ ನೀಡಿದ ಭಾರತ

ಅನಾರೋಗ್ಯಕ್ಕೀಡಾಗಿರುವ ಪತಿ ಎಂ. ನಟರಾಜನ್ ಅವರನ್ನು ಭೇಟಿ ಮಾಡುವ ಸಲುವಾಗಿ ವಿ.ಕೆ. ಶಶಿಕಲಾ ಅವರು 15 ದಿನಗಳ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದ್ದಾರೆಂದು ಎಐಎಡಿಎಂಕೆ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಅವರು ನಿನ್ನೆ ಹೇಳಿದ್ದರು.

RELATED ARTICLES  ನಿರಂತರ ಅಧ್ಯಯನ,ಅಭ್ಯಾಸ ಪ್ರಯತ್ನಗಳಿಂದ ವಿದ್ಯಾರ್ಥಿಗಳು ಉದ್ದೈಶಿಸಿದ ಗುರಿಯನ್ನು ತಲಪಬಹುದು: ಯು.ಎಸ್. ವಿಶ್ವೇಶ್ವರ ಭಟ್