Satwadhara News

ಲವ್ ಜಿಹಾದ್ ವಿರೋಧಿ ಪೋಲಿಸ್ ದಳವನ್ನು ಸ್ಥಾಪಿಸಲು ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ

ಕುಮಟಾ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡುವ ಸಲುವಾಗಿ ಕರ್ನಾಟಕ ಸರ್ಕಾರದ ಗಮನಕ್ಕೆ ತರಬೇಕು ಹಾಗೂ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯದ ಕುರಿತು ಚರ್ಚೆ ಮಾಡಬೇಕು ಎಂದು ಆಗ್ರಹಿಸಿ ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಹಿಂದುತ್ವನಿಷ್ಠರಾದ ಎಂ.ಆರ್.ಭಟ್, ಅರುಣ್ ಗಾವಡಿ, ಅಶೋಕ್ ಆಚಾರಿ, ನಾಗೇಂದ್ರ ಆಚಾರಿ, ಚೈತನ್ಯ ಆಚಾರಿ, ದೀಪಕ್ ಆಚಾರಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶರತ ಕುಮಾರ ನಾಯ್ಕ್, ಸಂದೀಪ್ ಭಂಡಾರಿ, ರಮಾನಾಥ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

Comments

Leave a Reply

Your email address will not be published. Required fields are marked *