ಮಾಂಡೌಸ್ ನಪರಿಣಾಮ ಹೆಚ್ಚಾಗಿದ್ದು, ಉತ್ತರಕನ್ನಡದ ಕೆಲ ತಾಲೂಕಿನಲ್ಲಿ ಮಳೆಯಾಗಿದೆ. ತುಂತುರು ಮಳೆ ಹಾಗೂ ಮೋಡದ ವಾತಾವರಣ ಮುಂದುವರೆದಿದೆ. ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಡಿಸೆಂಬರ್ 12ರವರೆಗೆ ಮೋಡ ಕವಿದ ವಾತಾವರಣ, ಚಳಿಯ ಜೊತೆಗೆ ಮಳೆ ಸುರಿಯಲಿದೆ ಎನ್ನಲಾಗಿದೆ. ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

RELATED ARTICLES  ಸೋಮವಾರದ ಒಪ್ಪತ್ತು ; ಅಂದು ಭಾರತಮಾತೆಯ ರಕ್ಷಣೆಗೆ, ಇಂದು ಗೋಮಾತೆಯ ಸಂರಕ್ಷಣೆಗೆ

ನಾಳೆ ಕೂಡ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ 3 ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

RELATED ARTICLES  ಕಳೆದುಹೋಗುವ ಭಾವನೆಗಳು: ಸನ್ಮಾರ್ಗವೇ ಜೀವನದ ಹರುಷ ಲೇಖನ ಮಾಲೆಗಳು(ಭಾಗ - 2)

ಮುಂದಿನ 24 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಚಿತ್ರದುರ್ಗ, ರಾಮನಗರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಜೆಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.