ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿOದ 30 ದಿನಗಳ ಜೆಸಿಬಿ ಆಪರೇಟಿಂಗ್ ಟ್ರೈನಿಂಗ್, ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್, ರಿಪೇರಿ, ರೆಫ್ರಿಜರೇಶನ್, ಏರ್ ಕಂಡೀಷನರ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಡಿ.25ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ತರಬೇತಿಯು ಜನವರಿ ತಿಂಗಳಲ್ಲಿ ಪ್ರಾರಂಭವಾಗಲಿದೆ. ತರಬೇತಿ ಊಟ- ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

RELATED ARTICLES  ಕರ್ನಾಟಕ ಹೈ ಕೋರ್ಟ್ ನೇಮಕಾತಿ ೨೦೧೮... ಲಾ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ


ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ: 9482188780948348548908284295307 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES  ಕುಮಟಾದಲ್ಲಿ ವಿದ್ಯುತ್ ವ್ಯತ್ಯಯ