ಬೆಂಗಳೂರು : ಪ್ರಸಕ್ತ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ವಾರ್ಷಿಕ ಪರೀಕ್ಷೆ ಜಾರಿಯಾಗಲಿದೆ ಎಂಬ ಬಗ್ಗೆ ವರದಿಯಾಗಿದೆ. ರಾಜ್ಯ ಸರ್ಕಾರ 5 ಮತ್ತು 8ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲು ಆದೇಶಿಸಿದೆ. ನವೆಂಬರ್ 2022 ರಿಂದ ಮಾರ್ಚ್ 2023ರವರೆಗೆ ಪಠ್ಯಪುಸ್ತಕ ಆಧರಿಸಿ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತದೆ.
ಮಕ್ಕಳ ಕಲಿಕಾ ಕೊರತೆಯನ್ನು ನೀಗಿಸಲು ಕಲಿಕಾ ಚೇತರಿಕೆ ಮಾಡಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಒಟ್ಟಾರೆಯಾಗಿ ಮಕ್ಕಳ ಕಲಕೆಯ ಮಟ್ಟವೇನು? ಕೊರತೆಗಳೇನು? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ.
ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯ-ಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡುವುದು ಅವಶ್ಯವಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ ಎನ್ನಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವರದಿ ಜಾರಿ ಮಾಡಿದ್ದು, ಶಿಕ್ಷಣ ಇಲಾಖೆ ಶಾಲಾ ವಿದ್ಯಾರ್ಥಿಗಳ ಕಲಿಕಾ ಮಟ್ಟ ಮತ್ತು ಪ್ರಗತಿಯ ಬಗೆಗಿನ ಅಧ್ಯಯನ ನಡೆಸಲು ಸೂಚನೆ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಿದ್ದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವರದಿ ನೀಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆಯುಕ್ತರಿಂದ ಆದೇಶ ಹೊರಡಿಸಿದ್ದು, ಮುಂಬರುವ ಮಾರ್ಚ್ ನಲ್ಲಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2 ಗಂಟೆಯ ಅವಧಿಗೆ 50 ಅಂಕಗಳ ನಿಗದಿಯಾಗಿದ್ದು, ಅದರಲ್ಲಿ 40 ಅಂಕ ಲಿಖಿತ ಮತ್ತು 10 ಅಂಕ ಮೌಖಿಕ ಪರೀಕ್ಷೆ ನಡೆಯಲಿದೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಅಡಿಯಲ್ಲಿ ಪ್ರಶ್ನೆಗಳು ಸಿದ್ದಪಡಿಸಲು ನಿರ್ಧರಿಸಲಾಗಿದೆ. ಸದ್ಯ 1ನೇ ತರಗತಿಯಿಂದ 9ನೇ ತರಗತಿ ವರೆಗೆ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ಇರಲಿಲ್ಲ. ಮಾರ್ಚ್ 9 2023 ರಿಂದ 17 ಮಾರ್ಚ್ 2023ರವರೆಗೆ ವಾರ್ಷಿಕ ಪರೀಕ್ಷೆ ಜರುಗಲಿದೆ. ಏಪ್ರಿಲ್ 08 ಮತ್ತು ಏಪ್ರಿಲ್ 10 ರಂದು ಫಲಿತಾಂಶ ಪ್ರಕಟಿಸುವುದು.
Source : BTV