ಬೆಂಗಳೂರು : 2014-15ನೇ ಸಾಲಿನ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮತ್ತೆ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ ನಾಲ್ವರು ಪ್ರೌಢಶಾಲಾ ಶಿಕ್ಷಕರನ್ನು ರಾಜ್ಯ ಅಪರಾಧ ತನಿಖಾ ದಳವು (ಸಿಐಡಿ) ಸೆರೆ ಹಿಡಿದಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 64ಕ್ಕೇರಿದ್ದು, ಇದೇ ಪ್ರಕರಣದಲ್ಲಿ ತಪ್ಪಿಸಿಕೊಂಡಿರುವ ಮತ್ತೆ ಕೆಲವು ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಹಾಲಿ ಹಾಗೂ ಮಾಜಿ ಅಧಿಕಾರಿಗಳ ಪತ್ತೆಗೆ ಸಿಐಡಿ ಕಾರ್ಯಾಚರಣೆ ಮುಂದುವರೆಸಿದೆ.

RELATED ARTICLES  ಮಾತಿನ ಮೋಡಿಗಾರ ರಂಗಕರ್ಮಿ ಮಾಸ್ಟರ್​ ಹಿರಣ್ಣಯ್ಯ ಇನ್ನಿಲ್ಲ..!

ವಿಜಯಪುರ ಜಿಲ್ಲೆ ಕಪನಿಂಬರಗಿ ಜಿಎಚ್‌ಎಸ್‌ ಶಾಲೆಯ ಪ್ರತಾಪ್‌ ಸಿಂಗ್‌, ಕೋಲಾರ ಜಿಲ್ಲೆ ಕೆಜಿಎಫ್‌ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಸೋಮನಗೌಡ ಪಾಟೀಲ್‌, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ವಿ.ಜಯಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊರಟಿ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಟಿ.ಯೋಗೇಶಪ್ಪ ಬಂಧಿತರಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಬಂಧಿಸಿದ್ದ ಆರೋಪಿಗಳನ್ನು ಬೆಂಗಳೂರಿಗೆ ಕರೆತಂದು ಸಿಐಡಿ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿತು.

RELATED ARTICLES  ಉತ್ತರ ಕನ್ನಡದ ಇಂದಿನ ಕೊರೋನಾ Update

ಬಳಿಕ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ ಅಧಿಕಾರಿಗಳು, ನ್ಯಾಯಾಲಯದ ಆದೇಶದ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಂಧಿತ ಶಿಕ್ಷಕರನ್ನು ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.