ನವದೆಹಲಿ : 2000 ರೂಪಾಯಿ ನೋಟು ಮುದ್ರಣ ಇಲ್ಲ. ನೋಟುಗಳ ಉತ್ಪಾದನೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೊತೆ ಸೇರಿ ಸರ್ಕಾರ ನಿರ್ಧರಿಸುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 2018-19ರ ಆರಂಭದಲ್ಲಿ 2,000 ರೂ ಮುಖಬೆಲೆಯ ನೋಟುಗಳ ಮುದ್ರಣಕ್ಕಾಗಿ ಯಾವುದೇ ಹೊಸ ಇಂಡೆಂಟ್ ಅನ್ನು ಮುದ್ರಣಾಲಯಕ್ಕೆ ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

RELATED ARTICLES  ಅಂಚೆ ಕಾರ್ಡಿನಲ್ಲಿ ಕವನ : ರಾಜ್ಯಮಟ್ಟದ ಕವನ ಸ್ಪರ್ಧೆ

ದೇಶದಲ್ಲಿ ಚಲಾವಣೆಯಾಗುತ್ತಿರುವ ನಕಲಿ ನೋಟುಗಳ ಬಗ್ಗೆ ಸರ್ಕಾರಕ್ಕೆ ತಿಳಿದಿದೆಯೇ ಎಂಬ ಪ್ರಶ್ನೆಗೆ ಸಚಿವರು
ರಾಜ್ಯಸಭೆಯಲ್ಲಿ ಉತ್ತರಿಸಿದರು. ಕೆಲವೊಂದು ಮುಖಬೆಲೆಯ ಬ್ಯಾಂಕ್ ನೋಟುಗಳ ಉತ್ಪಾದನೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಜೊತೆ ಸೇರಿ ಸರ್ಕಾರ ನಿರ್ಧರಿಸುತ್ತದೆ. 2019- 20, 2020-21, ಮತ್ತು 2021-22ರಲ್ಲಿ 2 ಸಾವಿರ ರೂ ಮುಖಬೆಲೆಯ ಕರೆನ್ಸಿ ನೋಟುಗಳ ಮುದ್ರಣದ ಬಗ್ಗೆ ಮಾಹಿತಿ ಕೇಳಿದ ಪ್ರಶ್ನೆಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಉತ್ತರಿಸಿದರು.

RELATED ARTICLES  ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ