ಸಿಗಂದೂರು : ಡಿಸೆಂಬರ್ ತಿಂಗಳಲ್ಲಿ ಶಾಲಾ ಪ್ರವಾಸಗಳನ್ನ ಕೈಗೊಳ್ಳುವುದು ಸಹಜ. ಬೇರೆ ಬೇರೆ ಊರುಗಳಿಂದ ವಿದ್ಯಾರ್ಥಿಗಳು ಪ್ರವಾಸಿ ತಾಣಗಳಿಗೆ ಬಂದು ಸ್ಥಳಗಳನ್ನು ವೀಕ್ಷಣೆ ಮಾಡುತ್ತಾರೆ. ಅದರ ಜೊತೆಗೆ ಪ್ರವಾಸಿ ಬಸ್ಸುಗಳ ಅಪಘಾತಗಳ ಸಂಖ್ಯೆಯು ಹೆಚ್ಚುತ್ತಿದ್ದು ಇಂದು ಅಂತಹುದೇ ಮತ್ತೊಂದು ಪ್ರಕರಣ ವರದಿಯಾಗಿದೆ.

RELATED ARTICLES  'ಏಪ್ರಿಲ್‌ 15ಕ್ಕೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ' :ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಬಸ್ ಸಿಗಂದೂರು ಬಳಿ ಪಲ್ಟಿಯಾಗಿರುವ ಘಟನೆ ನಡೆದಿದೆ ಎಂದು ಸ್ಥಳೀಯ ವರದಿ ತಿಳಿಸಿದೆ. ಶಾಲಾ ಮಕ್ಕಳು ಹಾಗೂ ಶಿಕ್ಷಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ಸುಮಾರು 50 ಮಕ್ಕಳು, 11 ಶಿಕ್ಷಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, 20 ಕ್ಕೂ ಹೆಚ್ಚು ಮಕ್ಕಳು ಹಾಗೂ 8 ಶಿಕ್ಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

RELATED ARTICLES  ಇಹ ಲೋಕ ತ್ಯಜಿಸಿರುವ ಭಾರತೀಯ ಚಿತ್ರರಂಗದ ಮೋಹಕ ತಾರೆ ಶ್ರೀದೇವಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಇಂದು.

ಗಾಯಾಳುಗಳನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದು, ಓರ್ವ ಬಾಲಕನಿಗೆ ತೀವ್ರ ಸ್ವರೂಪದ ಗಾಯವಾಗಿದ್ದು ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.