ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಹಿಂಪಡೆದುಕೊಂಡಿದೆ. ಈ ಹಿಂದೆ ಮಾಡಿದ ಆದೇಶ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು.
ಇದರಿಂದ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ, ಸದ್ಯ ಪರೀಕ್ಷೆ ಬದಲಾಗಿ ಶಾಲಾ ಹಂತದಲ್ಲೇ ಅದೇ ಅವಧಿಯಲ್ಲಿ ಪರಿಹಾರ ಬೋಧನೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.