ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಅಧಿಸೂಚನೆ ಹೊರಡಿಸಲಾಗಿದೆ. ಸರ್ಕಾರಿ ಪ್ರಥಮದ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವಂತ 310 ಪ್ರಾಂಶುಪಾಲರ ಗ್ರೇಡ್-1 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಪತ್ರದ ಅಧಿಸೂಚನೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಪರೀಕ್ಷಾ ಪ್ರಾಧಿಕರಾವನ್ನಾಗಿ ನಿಯೋಜಿಸಲಾಗಿದೆ.

RELATED ARTICLES  ಡಿ.26ರಂದು ಸೇವಂತಿಗೆ ಪುಷ್ಪ ಪ್ರದರ್ಶನ ಮತ್ತು ಮಾರಾಟ ಮೇಳ.

ಹುದ್ದೆಗಳ ವಿವರ
ರಾಜ್ಯವ್ಯಾಪಿ ಮಿಕ್ಕುಳಿದ ವೃಂದ – 265
ಕಲ್ಯಾಣ ಕರ್ನಾಟಕ ವೃಂದ -45
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 5000 ರೂ.ಗಳು
ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದ್ರೇ ಪ್ರಕ್ರಿಯೆ ಶುಲ್ಕವಾಗಿ 2,500 ರೂ.ಗಳು.

ಪ್ರಮುಖ ದಿನಾಂಕಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 16-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-01-2023
ಇ-ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ 17-01-2023

RELATED ARTICLES  "ಮಂಥನ" ಕಾರ್ಯಕ್ರಮ ಇಂದು.

ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ https://kea.kar.nic.in ಜಾಲತಾಣದ ಮೂಲಕ ಆನ್ ಲೈನ್ ಮೂಲಕವೇ ಸಲ್ಲಿಸಬೇಕು.

ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 100 ಅಂಕಗಳಿಗೆ 2 ಗಂಟೆಯ ಪರೀಕ್ಷೆ ನಡೆಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಪ್ಪದೇ ಕೆಇಎ ಅಧಿಕೃತ ವೆಬ್ ಸೈಟ್ https://kea.kar.nic.in ಗೆ ಭೇಟಿ ನೀಡಬಹುದು.