ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರ ರೂ.ಗಳಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.


ರಾಷ್ಟ್ರೀಯ ಸುರಕ್ಷತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಘೋಷಿತ ಅಪರಾಧಿಗಳ ಬಗ್ಗೆ ಮಾಹಿತಿ ನೀಡಿ ಪೊಲೀಸರಿಗೆ ನೆರವಾಗುವವರಿಗೆ 20,000 ರೂ.ಗಳ ನಗದು ಬಹುಮಾನ ನೀಡಲು ಅವಕಾಶವಿತ್ತು. ಈಗ ಅದನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

RELATED ARTICLES  ಸರಣಿ ಕಳ್ಳತನ ಯತ್ನ : ಚಿನ್ನದ ಅಂಗಡಿಗೆ ಕನ್ನ ಹಾಕಲು ಪ್ರಯತ್ನ


ಪೊಲೀಸ್ ಮಾಹಿತಿದಾರರಿಗೆ 20,000ದ ವರೆಗೆ ಮಾತ್ರ ಬಹುಮಾನ ನೀಡಲು ಅವಕಾಶ ಇರುವುದರಿಂದ ಹೆಚ್ಚಿನ ಜನ ಪೊಲೀಸ್‌ ಇಲಾಖೆಯ ಮನವಿಗೆ ಸ್ಪಂದಿಸುವುದಿಲ್ಲ. ಅದನ್ನು 5 ಲಕ್ಷದವರೆಗೂ ಬಹುಮಾನ ನೀಡಲು ಅವಕಾಶ ಕಲ್ಪಿಸಬೇಕು. ಆಗ ತ್ವರಿತವಾಗಿ ಆರೋಪಿಗಳನ್ನು ಬಂಧಿಸಲು ಸಹಕಾರಿಯಾಗುತ್ತದೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು 2021ರ ಡಿಸೆಂಬರ್‌ನಲ್ಲಿ ಗೃಹ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದರು. ಗೃಹ ಇಲಾಖೆಯು ಈ ಪ್ರಸ್ತಾವವನ್ನು ಆರ್ಥಿಕ ಇಲಾಖೆಗೆ ಕಳುಹಿಸಿತ್ತು.

RELATED ARTICLES  ದಿನಾಂಕ 08/06/2019ರ ದಿನ ಭವಿಷ್ಯ ಇಲ್ಲಿದೆ.