ಕುಮಟಾ : ಪದವಿಪೂರ್ವ ಶಿಕ್ಷಣ ಇಲಾಖಾ ವ್ಯಾಪ್ತಿಯ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ ೧೪ ಡಿಸೆಂಬರ್ ೨೦೨೨ ರಂದು ಬೆಂಗಳೂರು ಉತ್ತರ ಜಿಲ್ಲೆಯ ರಾಜಾಜಿನಗರದಲ್ಲಿ ಏರ್ಪಡಿಸಿದ ೨೦೨೨-೨೩ ನೇ ಸಾಲಿನ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕುಮಟಾ ತಾಲ್ಲೂಕಿನ ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ಆರು ವಿದ್ಯಾರ್ಥಿಗಳು ಭಾಗವಹಿಸಿ ಐದು ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದಿರುತ್ತಾರೆ. ರಾಜ್ಯಮಟ್ಟದಲ್ಲಿ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಏಕೈಕ ಕಾಲೇಜಾಗಿರುತ್ತದೆ. ವಿದ್ಯಾರ್ಥಿಗಳು ಅದ್ವಿತೀಯ ಸಾಧನೆಗೈದು ಕಾಲೇಜಿನ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕು. ಅದ್ವೈತ ಕಡ್ಲೆ ಮತ್ತು ಕು. ರಾಘವೇಂದ್ರ ಎನ್. ತಂಡ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಇಂಗ್ಲೀಷ್ ಚರ್ಚಾಸ್ಪರ್ಧೆಯಲ್ಲಿ ಕು. ಆಂಡ್ರಿಯಾ ಜಿ. ದ್ವಿತೀಯ ಸ್ಥಾನ ಹಾಗೂ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಕು. ಆಂಡ್ರಿಯಾ ವಿ. ದ್ವಿತೀಯ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಿದ ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಕು. ಶುಭಾ ನಾಯ್ಕ ತೃತೀಯ ಸ್ಥಾನಗಳಿಸಿದ್ದಾಳೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಶ್ರೀ. ಗುರುರಾಜ ಶೆಟ್ಟಿ, ಪ್ರಾಂಶುಪಾಲರಾದ ಶ್ರೀ. ಕಿರಣ ಭಟ್ಟ, ಉಪಪ್ರಾಂಶುಪಾಲರಾದ ಶ್ರೀಮತಿ. ಸುಜಾತಾ ಹೆಗಡೆ, ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕರಾದ ಕು. ಕವಿತಾ ಗೌಡ, ತಂಡದ ವ್ಯವಸ್ಥಾಪಕರಾದ ಶ್ರೀ. ನಿತೇಶ ಮೆಸ್ತಾ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.