ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಸ್ ನ 4 ಟೈರ್ ಗಳು ಕಿತ್ತು ಬಂದಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಶೈಕ್ಷಣಿಕ ಪ್ರವಾಸಕ್ಕೆ 55 ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್, ರಸ್ತೆ ಗುಂಡಿಗೆ ಬಿದ್ದು, ಬಸ್ ನ ಎಕ್ಸಲ್ ಕಟ್ ಆಗಿ 4 ಟೈರ್ ಕಿತ್ತು ಹೊರಬಂದಿದೆ. ಅದೃಷ್ಟವಶಾತ್ ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದ್ದು, ಮಕ್ಕಳು, ಶಿಕ್ಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯದ ಮದ್ದೂರಿನ ಶಾಲಾ ಮಕ್ಕಳು ಪ್ರವಾಸಕ್ಕಾಗಿ ತೆರಳಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.