ಕಾರವಾರ: ಪ್ರಧಾನಿ ಮೋದಿ ವಿರುದ್ಧ ಪಾಕ್ ಸಚಿವ ಭುಟ್ಟೋ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನ ಖಂಡಿಸಿ ಕಾರವಾರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಸುಭಾಷ್ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು, ಬಿಲಾವಲ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದರು. ಭಾವಚಿತ್ರಕ್ಕೆ ಎಂಜಲು ಉಗಿದು, ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಈ ವೇಳೆ ಭುಟ್ಟೋ ವಿರುದ್ಧ ಘೋಷಣೆ ಕೂಗಿದ್ದಷ್ಟೇ ಅಲ್ಲದೇ, ಕೊನೆಗೆ ಭುಟ್ಟೋ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೊ ವಿರುದ್ಧ ದೇಶದ ಬಿಜೆಪಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆಗಳು ನಡೆದಿದೆ. ಭುಟ್ಟೊ ಅವರ ಪ್ರತಿಕೃತಿ ದಹಿಸಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES  ಗುರು ಇರಬೇಕು- ಗುರಿಯ ಸೇರಲು!

ಭುಟ್ಟೊ ಹೇಳಿಕೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕವು ಶ್ರೀನಗರದಲ್ಲಿ ಪ್ರತಿಭಟನೆ ನಡೆಸಿತು. ‘ಭಟ್ಟೊ ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಮಹಾರಾಷ್ಟ್ರದ ಪುಣೆಯಲ್ಲೂ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು, ಪಾಕಿಸ್ತಾನದ ಧ್ವಜವನ್ನು ದಹಿಸಿ, ಪಾಕ್‌ ವಿರುದ್ಧ ಘೋಷಣೆಗಳನ್ನು ಕೂಗಿದರು.

ತಿಲಕ್‌ ಚೌಕದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಚಂದ್ರಶೇಖರ್‌ ಭಾವಂಕುಲೆ, ಪಕ್ಷದ ಹಲವು ಶಾಸಕರು, ಬಿಜೆಪಿಯ ಮಹಿಳಾ ಘಟಕ ಮತ್ತು ಇತರ ನಾಯಕರು ಪಾಲ್ಗೊಂಡಿದ್ದರು.

‘ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಧರ್ಮವನ್ನು ರಕ್ಷಿಸುತ್ತಿದ್ದಾರೆ. ಇದನ್ನು ಅರಗಿಸಿಕೊಳ್ಳಲು ಆಗದ ಪಾಕಿಸ್ತಾನ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವರ ಹೇಳಿಕೆಯನ್ನು ಸಹಿಸಲಾಗದು’ ಎಂದು ಭಾವಂಕುಲೆ ಹೇಳಿದರು.

RELATED ARTICLES  ಅರ್ಥಪೂರ್ಣವಾಗಿ ನಡೆದ ಆಟೋ ರಿಕ್ಷಾ ಚಾಲಕ ಮಾಲಕರಿಗೆ ಉಚಿತ ಸಮವಸ್ತ್ರ ವಿತರಣೆ, ರಿಕ್ಷಾ ಪಾಸಿಂಗ್ ಯೋಜನೆ ಹಾಗೂ ಔತಣಕೂಟ : ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದ ಗಣ್ಯರು.

ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಾಕ್‌ ವಿದೇಶಾಂಗ ಸಚಿವರ ವಿರುದ್ಧ ಪ್ರತಿಭಟನೆ ನಡೆಸಿದರು.

ಬಿಲಾವಲ್‌ ಭುಟ್ಟೊ ಅವರ ಹೇಳಿಕೆಯನ್ನು ಅಖಿಲ ಭಾರತ ಸೂಫಿ ಸಜ್ಜದನಾಶಿನ್‌ ಸಮಿತಿಯ ಮುಖ್ಯಸ್ಥ ನಾಸಿರುದ್ದಿನ್‌ ಚಿಸ್ತಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

‘ಪ್ರಧಾನಿ ಮೋದಿ ಅವರ ಬಗ್ಗೆ ಭುಟ್ಟೊ ಬಳಸಿರುವ ಭಾಷೆಯಿಂದಾಗಿ ಅವರ ಹುದ್ದೆಯಷ್ಟೇ ಅಲ್ಲದೆ ಇಡೀ ಪಾಕಿಸ್ತಾನದ ಸ್ಥಾನಮಾನವೇ ಕೆಳಮಟ್ಟಕ್ಕೆ ಕುಸಿದಂತಾಗಿದೆ’ ಎಂದು ಹೇಳಿದ್ದಾರೆ.

‘ನಮ್ಮ ತಾಯಿನಾಡಿನ ಪ್ರಧಾನಿಯ ಬಗ್ಗೆ ಪಾಕ್‌ ವಿದೇಶಾಂಗ ಸಚಿವರು ತುಚ್ಛವಾಗಿ ಮಾತನಾಡಿರುವುದನ್ನು ಬಲವಾಗಿ ಖಂಡಿಸುತ್ತೇನೆ’ ಎಂದು ಅವರು ತಿಳಿಸಿದ್ದಾರೆ.