ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ ಆರೋಪ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಯು ಬೈಕ್ ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿದ್ದು ಬಾಲಕಿಯ ತಂದೆಯ ಸ್ನೇಹಿತರಿಬ್ಬರು ಗಮನಿಸಿದ್ದರು. ನಿನ್ನೆ ಶನಿವಾರ ಅದೇ ಪ್ರದೇಶದಲ್ಲಿ ಆರೋಪಿ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ಕಟ್ಟಿಹಾಕಿ ಹೊಡೆದಿದ್ದಾರೆ.
ಬಾಲಕಿ ಪೋಷಕರ ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು ಆರೋಪಿ ದೂರಿನ ಮೇರೆಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ದೂರು ದಾಖಲಾಗಿದೆ.